News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ

Dml (1)
Photo Credit : By Author

ಬೆಳ್ತಂಗಡಿ: ಸತ್ಯ, ಧರ್ಮ, ನ್ಯಾಯ – ನೀತಿಯ ನೆಲೆಯಲ್ಲಿ ಸನಾತನ ಸಂಸ್ಕøತಿಯ ಸಂರಕ್ಷಣೆಯೊಂದಿಗೆ ಮನಪರಿವರ್ತನೆ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸೇವಾ ಕಾರ್ಯಗಳು ಹಾಗೂ ಕ್ರಾಂತಿಕಾರಿ ಪರಿವರ್ತನೆ ಸಾರ್ವಕಾಲಿಕ ಮೌಲ್ಯ ಹೊಂದಿದ್ದು ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಹೆಗ್ಗಡೆಯವರ ಸೇವಾ ಕಾರ್ಯಗಳ ಕಾರ್ಯವೈಖರಿ ಹಾಗೂ ಸಾಧನೆಯ ಫಲವಾಗಿ ಭವಿಷ್ಯದಲ್ಲಿ ಭಾರತ ವಿಶ್ವಗುರು ಮಾನ್ಯತೆಯನ್ನು ಹೊಂದಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹೆಗ್ಗಡೆಯವರ ಸೇವೆ ಸಾಧನೆಯನ್ನು ಮನ್ನಿಸಿಯೇ ಪ್ರಧಾನಿಯವರು ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ. ಧಾರ್ಮಿಕ, ಸಾಮಾಜಿಕ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಕೃಷಿ, ಪ್ರಕೃತಿ-ಪರಿಸರ ಸಂರಕ್ಷಣೆ ಮೊದಲಾದ ಕ್ಷೇತ್ರಗಳಲ್ಲಿ ನಮ್ಮ ಸ್ವಂತಿಕೆಯನ್ನು ಬಿಡದೆ ಹೊಸತನದ ಚಿಂತನೆಯೊಂದಿಗೆ ಕ್ರಾಂತಿಕಾರಿ ಪರಿವರ್ತನೆ ಮಾಡಿ ಭವ್ಯ ಭವಿಷ್ಯದ ಬಗ್ಗೆ ಹೆಗ್ಗಡೆಯವರು ಹೊಸ ಭರವಸೆಯನ್ನು ಮೂಡಿಸಿದ್ದಾರೆ ಎಂದು ಕಾಗೇರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಶುದ್ಧನೀರು ಹಾಗೂ ಪರಿಶುದ್ಧ, ಸಾತ್ವಿಕ ಆಹಾರ ಸೇವನೆಯೊಂದಿಗೆ ನಮ್ಮ ಆರೋಗ್ಯವನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಇಂದು ಶಿಕ್ಷಣ ಹಣ ಗಳಿಸುವ ಉದ್ಯಮವಾಗಿದೆ. ನೈತಿಕ ಮೌಲ್ಯಗಳು ಕುಸಿದಿವೆ. ಪ್ರತಿಭೆ ಕಮರಿ ಹೋಗುತ್ತಿದೆ. ಮನೆಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕಾರಯುತ ನೈತಿಕ ಶಿಕ್ಷಣ ನೀಡಿ ಸಮಾಜದ ಸಭ್ಯ, ಸುಸಂಸ್ಜøತ ನಾಗರಿಕರನ್ನು ರೂಪಿಸಬೇಕು ಎಂದು ಅವರು ಹೇಳಿದರು.

ಜೈನಧರ್ಮದ ತೀರ್ಥಂಕರರಾದ ಆದಿನಾಥ, ಪಾಶ್ರ್ವನಾಥ, ಮಹಾವೀರರಂತೆ ಹೆಗ್ಗಡೆಯವರು ಕೂಡಾ ಸತ್ಯ, ಅಹಿಂಸೆ, ಅಪರಿಗ್ರಹ, ತ್ಯಾಗ, ಬ್ರಹ್ಮಚರ್ಯ ಮೊದಲಾದ ಅಣು ವೃತಗಳನ್ನು ಸ್ವತಃ ಪಾಲನೆ ಮಾಡಿ ಸಮಾಜಕ್ಕೂ ನಿರಂತರ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರನ್ನು ಅಭಿನಂದಿಸಿದರು.

ಧರ್ಮಸ್ಥಳದಿಂದ ಹೊಸ ಯೋಜನೆಗಳು ಪ್ರಕಟ : ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತು ರಕ್ಷಣೆಗಾಗಿ ಮೂರು ಸಾವಿರ “ಶೌರ್ಯ” ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು.
ರಾಜ್ಯಸಭಾ ಸದಸ್ಯನ ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿದ್ದು ಈಗಾಗಲೇ ಸಮೀಕ್ಷೆ ನಡೆಸಲಾಗಿದೆ.

ಸರ್ಕಾರದ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ ಆರುಸಾವಿರದ ಐದುನೂರು ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು ಈ ವರ್ಷ ಇನ್ನೂ ಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಕಳೆದ ವರ್ಷ ಆರು ಕೋಟಿ ರೂ. ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು ಈ ವರ್ಷ ಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಲಾಗುವುದು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಐವತ್ತು ಲಕ್ಷ ಕುಟುಂಬಗಳ ಫಲಾನುಭವಿಗಳು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ. 365 ಸರ್ಕಾರಿ ಶಾಲೆಗಳಿಗೆ 2700 ಬೆಂಚು-ಡೆಸ್ಕುಗಳನ್ನು ವಿತರಿಸಲಾಗುವುದು. ಈ ವರ್ಷ 100 ಕೆರೆಗಳ ಹೂಳೆತ್ತಿ ಪುನಶ್ಚೇತನಕ್ಕೆ ಯೋಜನೆ ರೂಪಿಸಲಾಗಿದೆ. 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು. ಉಜಿರೆಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ 47 ಲಕ್ಷ ರೂ. ನೆರವು ನೀಡಲಾಗುವುದು. ಅನಾಥ ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆಗಾಗಿ ಐದು ಕೋಟಿ ರೂ. ವೆಚ್ಚದಲ್ಲಿ 500 ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.

ಈ ವರ್ಷ ಈಗಾಗಲೇ 7312 ದೇವಸ್ಥಾನಗಳಿಗೆ 89 ಕೋಟಿ ರೂ. ನೆರವು ನೀಡಲಾಗಿದೆ. ಧಾರವಾಡದಲ್ಲಿ 200 ಹಾಸಿಗೆಗಳ ಸಾಮಥ್ರ್ಯದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ. ಧರ್ಮಸ್ಥಳದಲ್ಲಿ ಭಕ್ತಾದಿಗಳ ಸೇವೆ ಮತ್ತು ಅನುಕೂಲಕ್ಕಾಗ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿಯಲ್ಲಿದ್ದು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ದೇವರ ಅನುಗ್ರಹ, ಕುಟುಂಬವರ್ಗದವರ ಸಹಕಾರ ಹಾಗೂ ಸಿಬ್ಬಂದಿಯ ಶ್ರದ್ಧಾ-ಭಕ್ತಿಯ ಕಾರ್ಯನಿಷ್ಠೆಯಿಂದ ಎಲ್ಲಾ ಸೇವಾ ಕಾರ್ಯಗಳು ಸುಗಮವಾಗಿ ನಡೆಯುತ್ತವೆ ಎಂದು ಹೆಗ್ಗಡೆಯವರು ಮೆಚ್ಚಗೆ ವ್ಯಕ್ತಪಡಿಸಿದರು.

ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಪ್ರೊ.ಎಸ್. ಪ್ರಭಾಕರ್, ಡಿ. ರಾಜೇಂದ್ರ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಶಾಸಕ ಕೆ. ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತು ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಒ.ಒ. ಅನಿಲ್ ಸ್ವಾಗತಿಸಿದರು.  ಡಿ.ಎಂ.ಸಿ.ಯ ಪ್ರಭಾಕರ್ ಧನ್ಯವಾದವಿತ್ತರು. ಉಪನ್ಯಾಸ ಮಹಾವೀರ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು