Categories: ಮಂಗಳೂರು

ಬೆಳ್ತಂಗಡಿ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ

ಬೆಳ್ತಂಗಡಿ: ಗಾಂಧೀಜಿಯವರು ಕಂಡಿದ್ದ ಸ್ವಚ್ಛ ಭಾರತ ಕನಸನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಾಕಾರಗೊಳಿಸುತ್ತಾ ಬಂದಿದ್ದಾರೆ. ದೇಶದಲ್ಲಿ ಸ್ವಚ್ಛತೆಯೆಡೆಗೆ ಪರಿವರ್ತನೆ ಕಂಡಿರುವುದು ಹರ್ಷದಾಯಕ. ಮಕ್ಕಳು ಭವಿಷ್ಯದ ಬುನಾದಿಯಾಗಿದ್ದು ಅವರಲ್ಲಿರುವ ಸೃಜನಾತ್ಮಕ ಶಕ್ತಿಯನ್ನು ಹೊರತೆಗೆಯುವ ಕೆಲಸ ಇಂದು ಬೆಳ್ತಂಗಡಿ ಪ.ಪಂ. ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಡಿ.೫ರಂದು ಪ.ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತಿಯಿಂದ ಡೇ-ನಲ್ಮ್ ಯೋಜನೆಯಡಿ ಬೀದಿಬದಿ ವ್ಯಾಪಾರಸ್ಥರಿಗೆ ಮಾರಾಟ ಪ್ರಮಾಣ ಪತ್ರ, ಡಾ| ಬಿ.ಆಂಬೇಡ್ಕರ್ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಕಾಮಗಾರಿ ಆದೇಶ ಪತ್ರ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಪಟ್ಟಣದ ೨೧ ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ, ೨೦ ಮಂದಿ ಎಸ್.ಎಸ್.ಟಿ. ಫಲಾನುಭವಿಗಳಿಗೆ ಡಾ| ಬಿ.ಆಂಬೇಡ್ಕರ್ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಕಾಮಗಾರಿ ಆದೇಶ ಪತ್ರ ವಿತರಿಸುವ ಕೆಲಸವಾಗಿದೆ. ಕಲ್ಲಗುಡ್ಡೆಯಲ್ಲಿ ನಿವೇಶನ ಹಂಚುವ ಕೆಲಸ ಒಂದು ವಾರದಲ್ಲಿ ನಡೆಯಲಿದ್ದು, ಭವಿಷ್ಯದ ಆಧಾರ ಸೂರಿನ ನಿರ್ಮಾಣದ ಕನಸು ಈಡೇರಿಸಲಾಗುವುದು ಎಂದು ಹೇಳಿದರು.

ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ಮಾತನಾಡಿ, ಸ್ವಚ್ಛ ಸರ್ವೇಕ್ಷಣ ಯೋಜನೆಯಡಿ ಪಟ್ಟಣ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗಗಳಿಗೆ ನಿರುಪಯುಕ್ತ ವಸ್ತುಗಳಿಂದ ಆಟಿಕ ಸಾಮಾನು ತಯಾರಿಸುವ ಸ್ಪರ್ಧೆ ಏರ್ಪಡಿಸಿ ಸ್ವಚ್ಛತೆಯ ಜಾಗೃತಿ ಮೂಡಿಸಲಾಗಿದೆ. ಪ.ಪಂ. ವ್ಯಾಪ್ತಿಯಲ್ಲಿ ಫಲಾನಭವಿಗಳನ್ನು ಆಯ್ಕೆಮಾಡಿ ವಾಜಪೇಯಿ ನಗರ ವಸತಿ ಯೋಜನೆಯಡಿ ೧.೨೦ ಲಕ್ಷ ರೂ. ಅನುದಾನ ಸಿಗಲಿದ್ದು, ಡಾ|ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ೨ ಲಕ್ಷ ರೂ. ಅನುದಾನ ಲಭ್ಯವಾಗಿದೆ ಎಂದು ತಿಳಿಸಿದರು.

ವಿಜೇತ ವಿದ್ಯಾರ್ಥಿಗಳು ಕಾಲೇಜು ವಿಭಾಗ
ಪ್ರಥಮ: ಬೆಳ್ತಂಗಡಿ ಸರಕಾರಿ ಪಿಯು ಕಾಲೇಜು ಕಾವ್ಯಾ ಎಂ.ಡಿ., ಲಿಖಿತಾ. ದ್ವಿತೀಯ: ವಾಣಿ ಕಾಲೇಜಿನ ಅಮೃತಾ, ಕೀರ್ತನಾ. ಪ್ರೌಢ ಶಾಲೆ ವಿಭಾಗ: ಪ್ರಥಮ: ಹೋಲಿ ರೆಡಿಮರ್ ಆ.ಮಾ.ಶಾಲೆ ವಿನಿಶಾ ಡಿಸೋಜ, ಸ್ಟೀಡಲ್ ವಾಸ್. ದ್ವಿತೀಯ: ವಾಣಿ ಆ.ಮಾ.ಶಾಲೆಯ ಅಭಿಜ್ಞಾ ಎಸ್.ಶೆಟ್ಟಿ, ಶ್ರುತಿ ಎಸ್.. ತೃತೀಯ: ಎಸ್.ಡಿ.ಎಂ. ಆ.ಮಾ.ಶಾಲೆಯ ಸುಭಿಕ್ಷಾ ಬಿ., ಅತೀಶ್ರಾಯ.

ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್ ನಾಯ್ಕ್, ಸದಸ್ಯರಾದ ಡಿ.ಜಗದೀಶ್, ತುಳಸಿ, ಅಂರೀಶ್, ಶರತ್, ಗೌರಿ, ನಾಮನಿರ್ದೇಶಿತ ಸದಸ್ಯರಾದ ಕೇಶವ, ಲಲಿತಾ ಉಪಸ್ಥಿತರಿದ್ದರು.

ಪ.ಪಂ. ಸಿಬಂದಿ ಮೆಟಿಲ್ಡಾ ಹಾಗೂ ಸಚಿನ್ ಕಾರ್ಯಕ್ರಮ ನಿರೂಪಿಸಿದರು.

Sneha Gowda

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

3 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

22 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

33 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

52 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago