News Karnataka Kannada
Friday, May 03 2024
ಮಂಗಳೂರು

ಬೆಳ್ತಂಗಡಿ: ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಡಾl ವೀರೇಂದ್ರ ಹೆಗ್ಗಡೆ ಸಂತಾಪ

Bengaluru: Dr. B.R. Ambedkar was sworn in in the Rajya Sabha today. Virendra Heggade
Photo Credit : By Author

ಬೆಳ್ತಂಗಡಿ: ಹಿರಿಯ ಕಲಾವಿದ ಕುಂಬ್ಳೆ ಸುಂದರರಾವ್ ಅವರ ನಿಧನದಿಂದ ಶ್ರೇಷ್ಠ ಕಲಾವಿದರೊಬ್ಬರ ಸ್ಥಾನ ಶೂನ್ಯವಾಗಿದೆ. ಅವರನ್ನು ಕಳೆದುಕೊಂಡು ಯಕ್ಷಗಾನ ರಂಗ ಬಡವಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಸಮಕಾಲೀನ ಯಕ್ಷಗಾನ ಕಲಾವಿದರಲ್ಲಿ ತಮ್ಮ ವಿಶಿಷ್ಠ ವಾಕ್‍ಚಾತುರ್ಯದಿಂದ ಶ್ರೇಷ್ಠ ಕಲಾವಿದರಾಗಿ ಮೆರೆದ ಕುಂಬ್ಲೆ ಸುಂದರರಾವ್ ನಮ್ಮ ಧರ್ಮಸ್ಥಳ ಮೇಳದಲ್ಲಿ ಪ್ರಧಾನ ಕಲಾವಿದರಾಗಿ ಅನೇಕ ವರ್ಷಗಳ ಕಾಲ ಸೇವೆ ಮಾಡಿದ್ದು ಅವರ ಪಾತ್ರವನ್ನು ಯಕ್ಷಗಾನ ಕ್ಷೇತ್ರ ಮರೆಯುವಂತಿಲ್ಲ. ಅವರ ಮಾತಿನ ಶೈಲಿ ಮತ್ತು ಪಾತ್ರಗಳಿಗೆ ಜೀವಕಳೆ ತುಂಬುವ ರೀತಿ ಅದ್ಭುತವಾಗಿತ್ತು.

ಸುರತ್ಕಲ್ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಅವರು ನನ್ನಲ್ಲಿ ಪ್ರಾಸಬದ್ಧವಾಗಿ ಹೇಳಿದ ಮಾತು ನನಗೆ ಇಂದಿಗೂ ನೆನಪಿದೆ. ಆಗ ಅವರು “ಗೆದ್ದರೆ ಎಮ್ಮೆಲ್ಲೆ, ಸೋತರೆ ನಿಮ್ಮಲ್ಲೆ” ಎಂದು ಹೇಳಿದ್ದರು. ಚುನಾವಣೆಯಲ್ಲಿ ವಿಜೇತರಾಗಿ ಅವರಿಗೆ ರಾಜಕೀಯ ಕ್ಷೇತ್ರದಲ್ಲಿಯೂ ಸೇವೆ ಮಾಡುವ ಅವಕಾಶ ಒಗದಿತ್ತು. ಅವರ ನಿಧನದಿಂದ ಶ್ರೇಷ್ಠ ಕಲಾವಿದರೊಬ್ಬರ ಸ್ಥಾನ ಶೂನ್ಯವಾಗಿದೆ. ಅವರನ್ನು ಕಳೆದುಕೊಂಡು ಯಕ್ಷಗಾನ ರಂಗ ಬಡವಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನೀಯಲಿ ಮತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಅವರು ಪ್ರಾರ್ಥಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು