Categories: ಮಂಗಳೂರು

ಬೆಳ್ತಂಗಡಿ: ಭಾರಿ ಗಾಳಿ ಮಳೆಗೆ ಮುರಿದು ಬಿದ್ದು ವಿದ್ಯುತ್ ಕಂಬಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಹಲವು ಗ್ರಾಮಗಳಲ್ಲಿ ಸಂಜೆ ಗಾಳಿ, ಗುಡುಗು ಸಹಿತ ಮಳೆ ಸುರಿದಿತ್ತು. ರಾತ್ರಿ 10ರ ಬಳಿಕ ಮತ್ತೆ ಭಾರಿ ಗುಡುಗು, ಸಿಡಿಲಿನೊಂದಿಗೆ ಒಂದು ತಾಸಿಗಿಂತ ಅಧಿಕ ಸಮಯ ಮಳೆಯಾಗಿದೆ.

ಉಜಿರೆ ಮೆಸ್ಕಾಂ ಉಪ ವಿಭಾಗದಲ್ಲಿ ಒಟ್ಟು 12 ವಿದ್ಯುತ್ ಕಂಬಗಳು ಗಾಳಿಗೆ ಮುರಿದು ಬಿದ್ದು ಎರಡು ಲಕ್ಷ ರೂ.ಗಿಂತ ಅಧಿಕ ಹಾನಿ ಸಂಭವಿಸಿದೆ. ಕಂಬಗಳು ಮುರಿದ ಕಾರಣ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಮುಂಡಾಜೆ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ರಾತ್ರಿ ಇಡೀ ವಿದ್ಯುತ್ ಪೂರೈಕೆ ಇರಲಿಲ್ಲ.

ನೆರಿಯ, ಚಾರ್ಮಾಡಿ ಮೊದಲಾದ ಪರಿಸರದಲ್ಲಿ ಭಾರಿ ಗಾಳಿ ಬೀಸಿದ್ದು ಅಡಕೆ ಮರ, ಬಾಳೆಗಿಡಗಳು, ಅಲ್ಲದೆ ಅರಣ್ಯ ಪ್ರದೇಶದ ಅಲ್ಲಲ್ಲಿ ಬೃಹತ್ ಗಾತ್ರದ ಮರಗಳು ಮುರಿದುಬಿದ್ದಿವೆ. ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕರಿಗೆ ಭಾನುವಾರ ಸುರಿದ ಮಳೆಯು ಕೊಂಚ ಸಮಾಧಾನ ನೀಡಿದೆ.

Gayathri SG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

3 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

4 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

4 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

5 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

5 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

5 hours ago