News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ಗುರುದೇವ ಪದವಿ ಕಾಲೇಜು ಉದ್ಯೋಗ ಸಂದರ್ಶನ ಹಾಗೂ ಪೂರ್ವ ತಯಾರಿ ಕಾರ್ಯಕ್ರಮ

Gurudeva Degree College Job Interview and Preparatory Programme
Photo Credit :

ಬೆಳ್ತಂಗಡಿ : ‘ಆತ್ಮವಿಶ್ವಾಸ ಮನುಷ್ಯನಿಗೆ ಬಹು ಮುಖ್ಯವಾದುದು. ಧೈರ್ಯವಿದ್ದರೆ ಉದ್ಯೋಗ ಸಂದರ್ಶನ ಉತ್ತಮವಾಗಿ ಎದುರಿಸುವುದು ಮಾತ್ರವಲ್ಲ, ಯಾವುದೇ ಉದ್ಯೋಗ ಮಾಡಲು ಮನುಷ್ಯನಿಗೆ ಸಾಧ್ಯವಿದೆ’ ಎಂದು ಉಜಿರೆ ಎಸ್‌ಡಿಎಂ ಕಾಲೇಜಿನ ಬಿ ವೋಕ್ ವಿಭಾಗದ ಉಪನ್ಯಾಸಕ ಪ್ರವೀಣ್ ಡಿ ಹೇಳಿದರು.

ಅವರು ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉದ್ಯೋಗ ಸಂದರ್ಶನ ಹಾಗೂ ಪೂರ್ವ ತಯಾರಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಶ್ರೀ ಗುರುದೇವ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ‘ಅಂತಿಮ ತರಗತಿಯ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಆಯ್ಕೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಪ್ರಸ್ತಾವಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿಯರಾದ ಪವಿತ್ರ ಸ್ವಾಗತಿಸಿ, ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.
ಅರ್ಥಶಾಸ್ತ್ರದ ಉಪನ್ಯಾಸಕಿ ಬಬಿತಾ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು