ಬೆಳ್ತಂಗಡಿ : ‘ಆತ್ಮವಿಶ್ವಾಸ ಮನುಷ್ಯನಿಗೆ ಬಹು ಮುಖ್ಯವಾದುದು. ಧೈರ್ಯವಿದ್ದರೆ ಉದ್ಯೋಗ ಸಂದರ್ಶನ ಉತ್ತಮವಾಗಿ ಎದುರಿಸುವುದು ಮಾತ್ರವಲ್ಲ, ಯಾವುದೇ ಉದ್ಯೋಗ ಮಾಡಲು ಮನುಷ್ಯನಿಗೆ ಸಾಧ್ಯವಿದೆ’ ಎಂದು ಉಜಿರೆ ಎಸ್ಡಿಎಂ ಕಾಲೇಜಿನ ಬಿ ವೋಕ್ ವಿಭಾಗದ ಉಪನ್ಯಾಸಕ ಪ್ರವೀಣ್ ಡಿ ಹೇಳಿದರು.
ಅವರು ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಉದ್ಯೋಗ ಸಂದರ್ಶನ ಹಾಗೂ ಪೂರ್ವ ತಯಾರಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಶ್ರೀ ಗುರುದೇವ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ‘ಅಂತಿಮ ತರಗತಿಯ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಆಯ್ಕೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಪ್ರಸ್ತಾವಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿಯರಾದ ಪವಿತ್ರ ಸ್ವಾಗತಿಸಿ, ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.
ಅರ್ಥಶಾಸ್ತ್ರದ ಉಪನ್ಯಾಸಕಿ ಬಬಿತಾ ವಂದಿಸಿದರು.
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…