Categories: ಮಂಗಳೂರು

ಬೆಳ್ತಂಗಡಿ: ಗುಡುಗು ಸಹಿತ ಮಳೆ, ಹಲವೆಡೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ,ಗುರುವಾಯನಕೆರೆ,ವೇಣೂರು,ಉಜಿರೆ,ಮುಂಡಾಜೆ ಕಲ್ಮಂಜ,ಚಾರ್ಮಾಡಿ ನಡ ಸೇರಿದಂತೆ ಬೆಳ್ತಂಗಡಿ ತಾಲೂಕಿನಲ್ಲಿ ಶುಕ್ರವಾರ ಸಂಜೆ ಗಾಳಿ, ಗುಡುಗು ಸಹಿತ ಉತ್ತಮ ಮಳೆ ಯಾಗಿದೆ. ಮಳೆಯ ಜತೆ ಗಾಳಿಯು ಬೀಸಿದ್ದು ಗ್ರಾಮೀಣ ಭಾಗಗಳಲ್ಲಿ ಅಡಕೆ ಮರಗಳು ಮುರಿದ ಘಟನೆಯು ನಡೆದಿದೆ.

ಚಾರ್ಮಾಡಿ ಘಾಟಿ ಪರಿಸರದಲ್ಲೂ ಉತ್ತಮ ಮಳೆ, ಮಂಜು ಕವಿದ ವಾತಾವರಣದಿಂದ ವಾಹನ ಸವಾರರು ಪರದಾಟ ನಡೆಸಿದರು. ಘಾಟಿಯ ನಾಲ್ಕನೇ ತಿರುವಿನಲ್ಲಿ ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಸ್ವಿಫ್ಟ್ ಹಾಗೂ ಎರಡನೇ ತಿರುವಿನಲ್ಲಿ ಜೆನ್ ಕಾರು ನಿಯಂತ್ರಣ ತಪ್ಪಿ ತಡೆಗೋಡೆಗೆ ಬಡಿದು ಉರುಳಿ ಬಿದ್ದ ಪ್ರತ್ಯೇಕ ಘಟನೆ ನಡೆಯಿತು.ಇದರಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಮಧ್ಯಾಹ್ನದ ವೇಳೆ ಚಾರ್ಮಾಡಿ ಪೇಟೆಯಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದು ಕಂಬ ಮುರಿದ ಘಟನೆಯು ನಡೆಯಿತು. ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರಸ್ತೆಯ ತೇಪೆ ಕಾಮಗಾರಿ  ನಡೆಯುತ್ತಿದ್ದು ಇದಕ್ಕೂ ಮಳೆ ಅಡ್ಡಿ ನೀಡಿದೆ.

Ashika S

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

60 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

1 hour ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

1 hour ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago