ಬೆಳ್ತಂಗಡಿ: ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರ ಮನೆಗೆ ಸೋಮವಾರ ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ದಾಳಿ ನಡೆಸಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ರಾಜಕೀಯದಿಂದ ಹಿಂದೆ ಸರಿದಿದ್ದರು. ಮನೆಯಲ್ಲಿರುವ ಸ್ವತ್ತು, ಕಾಲೇಜಿನ ದಾಖಲೆ ತಪಾಸಣೆ ನಡೆಯುತ್ತಿದೆ.
ಇತ್ತೀಚೆಗೆ ಉಡುಪಿಯ ಉದ್ಯಮಿ ಜಿ. ಶಂಕರ್ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದನ್ನು ನೆನಪಿಸಿಕೊಳ್ಳಬಹುದು.