Categories: ಮಂಗಳೂರು

ಬೆಳ್ತಂಗಡಿ: ೧೫೫೦ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

ಬೆಳ್ತಂಗಡಿ: ಶಿಬಿರದ ಮೂಲಕ ಮದ್ಯವ್ಯಸನಿಗಳ ಬದುಕನ್ನು ಹಸನು ಮಾಡಲಾಗುತ್ತಿದೆ. ಡಾ| ಹೆಗ್ಗಡೆಯವರ ಕಲ್ಪನೆಯಿಂದ ಲಕ್ಷಾಂತರ ಮಂದಿ ಸ್ವಾಭಿಮಾನದ ಬದುಕು ಕಂಡುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್‌ಸಿಂಹ ನಾಯಕ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಗುರುವಾಯನಕೆರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ತಾಲೂಕು ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎಸ್‌ಡಿಎಂ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ ಸೋಮವಾರ ಜರಗಿದ ೧೫೫೦ನೇ ಮದ್ಯವರ್ಜನ ಶಿಬಿರದ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.

ಅತ್ಯಂತ ವಿಶ್ವಾಸದೊಂದಿಗೆ ಶಿಬಿರಾರ್ಥಿಗಳು ಶಿಬಿರಕ್ಕೆ ಹಾಜರಾಗಿದ್ದೀರಿ. ನಿತ್ಯ ಶ್ರೇಯಸ್ಸನ್ನೇ ಬಯಸಿ, ನವಜೀವನ ನಿಮ್ಮದಾಗುತ್ತದೆ ಎಂದರು.

ತಾಲೂಕು ಜನಜಾಗೃತಿ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.  ನಾರಾವಿ  ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಭಟ್ ಅಧ್ಯಕ್ಷತೆ ವಹಿಸಿದ್ದರು. ನಾರಾವಿ ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ತಾ| ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ರೈ, ಮಾಜಿ ಅಧ್ಯಕ್ಷ ಕಿಶೋರ್ ಹೆಗ್ಡೆ, ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಪ್ರಸ್ತಾವಿಸಿದರು. ಜನಜಾಗೃತಿ ವಲಯಧ್ಯಕ್ಷ ನಿತ್ಯಾನಂದ ನಾವರ ಸ್ವಾಗತಿಸಿದರು. ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ ಎಸ್. ನಿರೂಪಿಸಿ, ವಲಯ ಮೇಲ್ವಿಚಾರಕಿ ದಮಯಂತಿ ವಂದಿಸಿದರು.

Ashika S

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

14 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago