Categories: ಮಂಗಳೂರು

ಬೆಳ್ತಂಗಡಿ: ಅ.23ರಂದು ಕೊಯ್ಯೂರಿನ ಮಲೆಕುಡಿಯರ ಸಮುದಾಯಭವನದಲ್ಲಿ ಭೂ ಮಸೂದೆಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಅ. 23ರಂದು ಆದಿತ್ಯವಾರ ಬೆಳ್ತಂಗಡಿಯ ಕೊಯ್ಯೂರು ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ಬೆಳಗ್ಗೆ 9.30ಕ್ಕೆ ಮಲೆಕುಡಿಯರ ಸಂಘ (ರಿ.) ದ.ಕ. ಜಿಲ್ಲಾ ಸಮಿತಿ ಇದರ ನೇತೃತ್ವದಲ್ಲಿ ಭೂ ಮಸೂದೆ ಕಾನೂನುಗಳ ಮಾಹಿತಿ ಕಾರ್ಯಗಾರ ನಡೆಯಲಿದೆ.

ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟ, ರಾಜ್ಯ ಮಲೆಕುಡಿಯರ ಸಂಘ ಮತ್ತು ಕೊರಗ ಅಭಿವೃದ್ಧಿ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಉಡುಪಿಯ ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷರಾದ ಅಶೋಕ್ ಶೆಟ್ಟಿಯವರು ಮಾಹಿತಿ ನೀಡಲಿದ್ದಾರೆ. ಮಲೆಕುಡಿಯರ ಸಂಘ (ರಿ.) ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಹರೀಶ್ ಎಳನೀರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ರಾಜ್ಯ ಮಲೆಕುಡಿಯರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ. ಜಿಲ್ಲೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಸಂಚಾಲಕರಾದ ಬಾಲಕೃಷ್ಣ ಕೆ ಪೊಳಲಿ, ಹಾಗೂ ಸಂಜೀವ, ಕೊರಗ ಅಭಿವೃದ್ಧಿ ಸಂಘ, ಪುತ್ತೂರು ಇದರ ಪ್ರಧಾನ ಕಾರ್ಯದರ್ಶಿ ಕಮಲ ಉಪಸ್ಥಿತಿ ಇರಲಿದ್ದಾರೆ.

ಈ ಮಾಹಿತಿ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ಮಲೆಕುಡಿಯ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಮಲೆಕುಡಿಯರ ಸಂಘ (ರಿ.) ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

13 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

29 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

36 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

51 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

51 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

1 hour ago