ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿ ವಿವಾಹಿತ ಮಹಿಳೆಯೊಬ್ಬರು ಗುರುವಾರ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ಮಹಿಳೆ ಇಲ್ಲಿನ ನಿವಾಸಿ ದೀಪಕ್ ಎಂಬವರ ಪತ್ನಿ, ಚೈತ್ರಾ ಅಡಿಗ (25)ಎಂಬುವರಾಗಿದ್ದಾರೆ. ಇವರು ಉಜಿರೆ ಖಾಸಗಿ ಶಾಲೆಯ ಶಿಕ್ಷಕಿಯಾಗಿ ಕೆಲ ಕಾಲ ಕೆಲಸ ಮಾಡಿದ್ದರು. ಇದೀಗ ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ. ಮೂರು ವರ್ಷದ ಹಿಂದೆ ಇವರ ವಿವಾಹವಾಗಿದ್ದು ಇವರಿಗೆ ಒಂದು ಮಗುವೂ ಇದೆ. ಸಾಹಿತ್ಯ ಸಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಈಕೆ ಸಕ್ರಿಯರಾಗಿದ್ದರು.
ಎಂ.ಎ.ಮುಗಿಸಿ, ಬಿ.ಎಡ್ ಶಿಕ್ಷಣ ಮುಂದುವರಿಸಬೇಕು ಎಂಬ ಇರಾದೆಯನ್ನು ಹೊಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.