Categories: ಮಂಗಳೂರು

ಬೆಳ್ತಂಗಡಿ: ತಾಲ್ಲೂಕಿನ ಶೌರ್ಯ ಸಮಿತಿಗೆ ಮಾಸ್ಟರ್ ಮತ್ತು ಕ್ಯಾಪ್ಟನ್ ಆಯ್ಕೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಾಕೃತಿಕ ದುರಂತಗಳ ನಿರ್ವಹಣೆಗೆಂದು ಆರಂಭಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮವು ರಾಜ್ಯದ 11 ಜಿಲ್ಲೆಗಳ 62 ತಾಲ್ಲೂಕುಗಳಲ್ಲಿ ವಿಸ್ತಾರಗೊಂಡಿದೆ ಎಂದು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಸ್ ಹೇಳಿದರು.

ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ಮಾಸಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಳ್ತಂಗಡಿ ತಾಲ್ಲೂಕಿನಲ್ಲಿ ಕಳೆದ ಎರಡುವರೆ ವರ್ಷದ ಹಿಂದೆ ಆರಂಭಿಸಲಾದ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದಲ್ಲಿ 8620 ಸ್ವಯಂಸೇವಕರು ಸೇರ್ಪಡೆಗೊಂಡಿದ್ದಾರೆ ಎಂದರು.

ಮುಂದಿನ ಐದು ವರ್ಷಗಳಲ್ಲಿ 20 ಸಾವಿರ ಸ್ವಯಂಸೇವಕರು ಸೇರ್ಪಡೆಗೊಳ್ಳಲಿದ್ದಾರೆ. ಮಳೆಗಾಲದಲ್ಲಿ ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ಸ್ವಯಂಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡು ಉಳಿದ ದಿನಗಳಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಆಪತ್ ಕಾಲದ ಬಾಂಧವರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಇದುವರೆಗೆ ಸ್ವಯಂಸೇವಕರು 53,800 ಸೇವಾ ಚಟುವಟಿಕೆಗಳನ್ನು ಮಾಡಿದ್ದಾರೆ. ವಿಪತ್ತು ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ 6380 ಕಾರ್ಯಕ್ರಮಗಳನ್ನು ಮಾಡಿದ್ದಾರೆ. ವಿಪತ್ತು ನಿರ್ವಹಣೆ ಘಟಕಗಳ ಸ್ವಯಂಸೇವಕರ ಸೇವಾ ಚಟುವಟಿಕೆಗಳನ್ನು ಗಮನಿಸಿದ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆಯವರು ಶೌರ್ಯ ಎನ್ನುವ ಹೆಸರನ್ನು ನೀಡಿದ್ದಾರೆ ಎಂದರು.

ಬೆಳ್ತಂಗಡಿ ತಾಲ್ಲೂಕಿನ ಸ್ವಯಂಸೇವಕರಿಗೆ ಶೌರ್ಯ ಘಟಕಗಳ ಬಲವರ್ಧನೆ, ಗುಣಮಟ್ಟದ ಸೇವಾಕಾರ್ಯಗಳ ಆಯೋಜನೆ, ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಬೆಳ್ತಂಗಡಿ ವಿಪತ್ತು ನಿರ್ವಹಣಾ ಸಮಿತಿಗೆ ಎರಡು ಲಕ್ಷ ರೂಪಾಯಿ ಮೌಲ್ಯದ ಪರಿಕರಗಳನ್ನು ಯೋಜನೆಯಿಂದ ನೀಡಲಾಗಿದ್ದು ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ವಿಪತ್ತು ನಿರ್ವಹಣಾ ಸಮಿತಿಯು ಸ್ವತಂತ್ರವಾಗಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ತಾಲ್ಲೂಕಿಗೆ ಓರ್ವ ಮಾಸ್ಟರ್ ಹಾಗೂ ಕ್ಯಾಪ್ಟನ್ ಆಯ್ಕೆ ಮಾಡಲಾಗುತ್ತಿದ್ದು ಇವರು ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸಂಪರ್ಕದಲ್ಲಿ ಇದ್ದು, ಸ್ಥಳೀಯವಾಗಿ ನಡೆಯುವ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ವಿಪತ್ತು ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ಸಮಿತಿಗಳಿಗೆ ಮಾಸ್ಟರ್ ಹಾಗೂ ಕ್ಯಾಪ್ಟನ್ ಆಯ್ಕೆ ಮಾಡಲಾಯಿತು. ಗುರುವಾಯನಕೆರೆಯ ವಿಪತ್ತು ನಿರ್ವಹಣಾ ಸಮಿತಿಗೆ ಮಾಸ್ಟರ್ ಆಗಿ ಶ್ರೀಕಾಂತ್ ಪಟವರ್ಧನ್ ಹಾಗೂ ಕ್ಯಾಪ್ಟನ್ ಆಗಿ ಸತೀಶ್ ಆಚಾರ್ಯ ಇವರನ್ನು ಹಾಗೂ ಬೆಳ್ತಂಗಡಿ ಸಮಿತಿಯ ಮಾಸ್ಟರ್ ಆಗಿ ಸ್ನೇಕ್ ಪ್ರಕಾಶ್ ಹಾಗೂ ಕ್ಯಾಪ್ಟನ್ ಆಗಿ ಸಂತೋಷ್ ಬೆಳಾಲು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪಾಲ್ಗೊಂಡ ಎಲ್ಲಾ ಸ್ವಯಂಸೇವಕರಿಗೆ ಸಮವಸ್ತ್ರವನ್ನು ವಿತರಣೆ ಮಾಡಲಾಯಿತು. ಒಂದು ಟೀ ಶಟ್ ಹಾಗೂ ಪ್ಯಾಂಟ್ ವಿತರಣೆ ಮಾಡಲಾಯಿತು. ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಕುಮಾರ್, ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ್, ಎಲ್ಲಾ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಘಟಕ ಸೇವಾಪ್ರತಿನಿಧಿಗಳು, 263 ಸ್ವಯಂಸೇವಕರು ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago