ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ದೂರದೃಷ್ಟಿ ಯೋಜನೆಯಾಗಿರುವ ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಕಿರು ವಿಮಾನ ನಿಲ್ದಾಣದ ಪ್ರಸ್ತಾವನೆಯ ಮೇಲೆ ವಿಧಾನ ಸೌಧದಲ್ಲಿ ಸಚಿವ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು.
ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು ತಕ್ಷಣವೇ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.