Categories: ಮಂಗಳೂರು

ಬೆಳ್ತಂಗಡಿ: ಕೊಯಂಬುತ್ತೂರು ಧರ್ಮಸ್ಥಳ ಮಧ್ಯೆ ಮೋಲ್ವೊ ಬಸ್ ಸೇವೆ ಆರಂಭ

ಬೆಳ್ತಂಗಡಿ: ಕೆ.ಎಸ್.ಆರ್.ಟಿ.ಸಿ. ವತಿಯಿಂದ ಕೊಯಂಬುತ್ತೂರು ಧರ್ಮಸ್ಥಳ ಮಧ್ಯೆ ಮೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶುಭ ಹಾರೈಸಿದರು.

ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ವಿಭಾಗೀಯ ಸಂಚಲನಾಧಿಕಾರಿ ಮರಿಗೌಡ, ವಿಭಾಗೀಯ ತಾಂತ್ರಿಕ ಶಿಲ್ಪಿ ನವೀನ್ ಕುಮಾರ್, ಮಂಗಳೂರು ಎರಡನೇ ಘಟಕದ ಘಟಕ ವ್ಯವಸ್ಥಾಪಕ ಕರುಣಾಕರ ಉಪಸ್ಥಿತರಿದ್ದರು.

ಬಸ್ ಪ್ರತಿ ದಿನ ಅಪರಾಹ್ನ ಗಂಟೆ ೩.೩೦ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ ೯ ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ ೧೦.೧೫ಕ್ಕೆ ಹೊರಡುವ ಬಸ್ ಮುಂಜಾನೆ ೪ ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ ೫ ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಅಪರಾಹ್ನ 3.30 ಕ್ಕೆ ಹೊರಟು ಪುತ್ತೂರು, ಸುಳ್ಯ, ಮಡಿಕೇರಿ, ಮೈಸೂರು 10 ಗಂಟೆಗೆ ಮೈಸೂರು ತಲುಪಿ ಮರುದಿನ ಮುಂಜಾನೆ 5 ಗಂಟೆಗೆ ಕೊಯಂಬತ್ತೂರು ತಲುಪಲಿದೆ. ಎಂದು ಕೆ.ಎಸ್.ಆರ್.ಟಿ.ಸಿ ಪ್ರಕಟಣೆ ತಿಳಿಸಿದೆ.

Gayathri SG

Recent Posts

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

7 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

28 mins ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

1 hour ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

1 hour ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

1 hour ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 hours ago