ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಬಜಿರೆ ಗ್ರಾಮದ ಮುದ್ದಾಡಿ ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೈವಸ್ಥಾನದಲ್ಲಿ ಮೆಟ್ಟಿಲು ರಚನೆಗೆ ರೂ. ೧೦ ಲಕ್ಷ ವೆಚ್ಚದ ಕಾಮಗಾರಿಗೆ ಸೋಮವಾರ ಶಿಲಾನ್ಯಾಸ ನೆರವೇರಿತು.
ಶಾಸಕ ಹರೀಶ್ ಪೂಂಜ ಅವರು ಶಿಲಾನ್ಯಾಸ ನೆರವೇರಿಸಿ, ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಸಹಕಾರ ನೀಡುವುದಾಗಿ ತಿಳಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್, ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾರಗುತ್ತು ಯಂ. ವಿಜಯರಾಜ ಅಧಿಕಾರಿ, ಪೆರ್ಮಾಣುಗುತ್ತು ಸುರೇಶ್ ಆರಿಗ, ಗ್ರಾ.ಪಂ. ಸದಸ್ಯರಾದ ಅರುಣ್ ಕ್ರಾಸ್ತ, ಸುನಿಲ್ ಕುಮಾರ್, ಲೋಕಯ್ಯ ಪೂಜಾರಿ, ಸುಜಾತ, ಲೀಲಾವತಿ, ಮಲ್ಲಿಕಾ, ಸಂಭಾಷಿಣಿ ಉದಯಕುಮಾರ್, ದಿನೇಶ್ ತಾರಿಪಡ್ಪು, ದೈವಸ್ಥಾನಕ್ಕೆ ಸಂಬಂಧಿತ ಗುರಿಕಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕುಂಞಡಿ ಲಕ್ಷ್ಮೀನಾರಾಯಣ ಅಸ್ರಣ್ಣರು ಪೂಜಾ ವಿಧಾನ ನೆರವೇರಿಸಿದರು.
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…