Categories: ಮಂಗಳೂರು

ಬೆಳ್ತಂಗಡಿ: ಆ.15ರಂದು ಅಮೃತಮಹೋತ್ಸವದ ಸಂದೇಶ ನೀಡಲಿದ್ದಾರೆ ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೋಮವಾರ ಬೆಳಿಗ್ಗೆ ಗಂಟೆ 8.45ಕ್ಕೆ ಉಜಿರೆಯಲ್ಲಿ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಅಮೃತಮಹೋತ್ಸವದ ಸಂದೇಶ ನೀಡುವರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಕೆ.ಜಿ. ಯಿಂದ ಪಿ.ಜಿ. ವರೆಗಿನ ಎಲ್ಲಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶಿಕ್ಷಕವೃಂದ, ಎನ್.ಸಿ.ಸಿ. ಕೆಡೆಟ್‍ಗಳು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಸಮಾರಂಭದಲ್ಲಿ ಭಾಗವಹಿಸುವರು.

ವಿಶಿಷ್ಠ ಕಾರ್ಯಕ್ರಮ: ಹೆಗ್ಗಡೆಯವರ ಪರಿಕಲ್ಪನೆ ಮತ್ತು ನಿರ್ದೇಶನದಂತೆ ವಿನೂತನ ಕಾರ್ಯಕ್ರಮ ಒಂದನ್ನು ಆಯೋಜಿಸಲಾಗಿದೆ.

ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ದೇಶದ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸುತ್ತಾರೆ. ಇಷ್ಟರ ವರೆಗೆ ದೇಶದ ಪ್ರಗತಿಗೆ ಹಿರಿಯರು ಶ್ರಮಿಸಿದ್ದಾರೆ. ಮುಂದಿನ ಹೊಣೆಗಾರಿಕೆಯನ್ನು ಯುವಜನತೆಗೆ ಒಪ್ಪಿಸುವ ಸೃಷ್ಟಿಯಿಂದ 75 ಮಂದಿ 75 ವರ್ಷ ಪೂರೈಸಿದ ಹಿರಿಯ ನಾಗರಿಕರಿಂದ 75 ಮಂದಿ ಯುವಕ, ಯುವತಿಯರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿ ದೇಶಪ್ರೇಮ, ದೇಶಭಕ್ತಿಯೊಂದಿಗೆ ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ಕರ್ತವ್ಯ ಮತ್ತು ಹೊಣೆಗಾರಿಕೆಯನ್ನು ಹಸ್ತಾಂತರಿಸಲಾಗುವುದು. ಗುರು-ಹಿರಿಯರ ಪಕ್ವ ಅನುಭವ ಮತ್ತು ಮಾರ್ಗದರ್ಶನದಲ್ಲಿ ಯುವಜನತೆ ರಾಷ್ಟ್ರ ನಿರ್ಮಾಣದ ಪವಿತ್ರ ಕಾರ್ಯದಲ್ಲಿ ಭಾಗವಹಿಸಬೇಕೆಂಬುದು ಹೆಗ್ಗಡೆಯವರ ಆಶಯ ಮತ್ತು ಅಪೇಕ್ಷೆಯಾಗಿದೆ.

Gayathri SG

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

12 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

26 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

42 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago