Categories: ಮಂಗಳೂರು

ಬೆಳ್ತಂಗಡಿ: ಕುಪ್ಪೆಟ್ಟಿ ವಲಯದ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಇವರ ಸಹಯೋಗದೊಂದಿಗೆ ಕುಂಟಾಲಪಲ್ಕೆ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಸುಮಾರು 16 ಶಾಲೆಗಳ ವಿದ್ಯಾರ್ಥಿಗಳ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಮತ್ತು ಕಿರಿಯ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಪಡೆದುಕೊಂಡಿತು. ಹಿರಿಯ ಪ್ರಾಥಮಿಕ ವಿಭಾಗದ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಣಿಯೂರು ಪದ್ಮುಂಜ ಪಡೆದರೆ,ಕಿರಿಯ ಪ್ರಾಥಮಿಕ ವಿಭಾಗದ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಶಾಲೆ ಉರುವಾಲು ಪಡೆದುಕೊಂಡಿತು.

ಸಂಜೆ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಬಂದಾರು ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ  ಮೋಹನ ಬಂಗೇರ ಕೆ,ಗ್ರಾ.ಪಂ.ಸದಸ್ಯರಾದ  ದಿನೇಶ್ ಖಂಡಿಗ, ಮೋಹನ್ ಕೋಡ್ಯೇಲು, ಸಮಗ್ರ ಪ್ರಶಸ್ತಿಯ ಟ್ರೋಫಿಯ ಪ್ರಾಯೋಜಕರಾದ ಮುಳಿಯ ಜುವೆಲರ್ಸ್ ಬೆಳ್ತಂಗಡಿಯ ಪರವಾಗಿ ಸಿಬ್ಬಂದಿ ಗಳಾದ ಪ್ರಕಾಶ್ ಮತ್ತು  ಜಯಂತ್ ಹಾಗೂ ಸಮಗ್ರ ದ್ವಿತೀಯ ಪ್ರಶಸ್ತಿಯ ಟ್ರೋಫಿಯ ಪ್ರಾಯೋಜಕರಾದ  ಜಯಣ್ಣ ಗೌಡ ಮಿನಂದೇಲು,ಮೈರೋಳ್ತಡ್ಕ ಶಾಲಾ ಮುಖ್ಯೋಪಾಧ್ಯಾಯರಾದ  ಚಂದ್ರಾವತಿ, ಎಸ್.ಡಿ.ಎಂ.ಸಿ.ಸದಸ್ಯರಾದ  ಶ್ರೀನಿವಾಸ ಗೌಡ ವಿಜೇತ ಶಾಲೆಗಳಿಗೆ ಪ್ರಶಸ್ತಿಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಬಹುದೊಡ್ಡ ಕೊಡುಗೆ ನೀಡಿದ ಮುಳಿಯ ಜುವೆಲರ್ಸ್ ಸಿಬ್ಬಂದಿ ಗಳಿಗೆ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಹಳೆವಿದ್ಯಾರ್ಥಿಗಳು, ವಿವಿಧ ಸಮಿತಿಯ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ನಿರ್ವಹಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಗಾಯತ್ರಿ ಕೆ,ಹರಿಣಾಕ್ಷಿ ಎನ್, ರೇಷ್ಮಾ ,ಸಿ.ಆರ್.ಪಿ.ಮಹಮ್ಮದ್ ಶರೀಫ್ ಕೆ.ಪಿ.,ಮೈರೋಳ್ತಡ್ಕ ಶಾಲಾ ಶಿಕ್ಷಕ ಮಾಧವ ಗೌಡ, ಅಂಡೆತಡ್ಕ ಶಾಲಾ ಶಿಕ್ಷಕ ರಾಘು ,ಶಾಲಾ ಹಳೆ ವಿದ್ಯಾರ್ಥಿಗಳು ಸಹಕರಿಸಿದರು.

Gayathri SG

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

5 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

21 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago