News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಅಳದಂಗಡಿಯಲ್ಲಿ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿದ ರಾಜೇಂದ್ರ ಕುಮಾರ್

Rajendra Kumar visits Sri Mahaganapathi Temple at Aladangadi
Photo Credit : By Author

ಬೆಳ್ತಂಗಡಿ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಶನಿವಾರ ಅಳದಂಗಡಿಯಲ್ಲಿ ಶ್ರೀ ಮಹಾಗಣಪತಿಗೆ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ದೇವರ ದರ್ಶನ ಮಾಡಿ, ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.5 ಲಕ್ಷದ ದೇಣಿಗೆಯನ್ನು ನೀಡಿ ಸಹಕರಿಸಿದರು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ ಸ್ವಾಗತಿಸಿದರು. ಕೋಶಾಧಿಕಾರಿ ಅನಿಲ್ ಕುಮಾರ್, ಸದಸ್ಯರಾದ ಸುರೇಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ಮೋಹನದಾಸ, ಸುಭಾಶ್ಚಂದ್ರ ರೈ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಸದಸ್ಯರಾದ ಸದಾನಂದ ಮಲೆಕುಡಿ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಅರ್ಚಕ ಸೋಮನಾಥ ಮಯ್ಯ ಆಶೀರ್ವದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು