Categories: ಮಂಗಳೂರು

ಬೆಳ್ತಂಗಡಿ: ಗುಂಡೂರಿಯಲ್ಲಿ ನಿವಾರಣೆಯಾದ ಪಡಿತರ ಸಮಸ್ಯೆ

ಬೆಳ್ತಂಗಡಿ: ಮಳೆ, ಬಿಸಿಲಿಗೆ ಸಂಚಾರಿ ವಾಹನದಲ್ಲಿ ರಸ್ತೆಬದಿಯಲ್ಲಿ ಪಡಿತರ ವಿತರಣೆ ಮಾಡುತ್ತಿದ್ದ ನರಕಯಾತನೆಗೆ ಕೊನೆಗೂ ಮುಕ್ತಿ ದೊರೆತಿದೆ. ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘವು ಗುಂಡೂರಿಯಲ್ಲಿ ಪಡಿತರ ವಿತರಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪಡಿತರ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ನ.೧೫ರಂದು ಪಡಿತರ ವಿತರಣೆಯನ್ನು ನೂತನ ಗೋಡೌನ್ ಕಟ್ಟಡದಲ್ಲಿ ಆರಂಭಿಸಲಾಗಿದ್ದು, ಸಂಘದ ಅಧ್ಯಕ್ಷ ಪ್ರವೀಣ್‌ಚಂದ್ರ ಜೈನ್, ನಿರ್ದೇಶಕರಾದ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಕುಮಾರು ಹೆಗ್ಡೆ, ಭಾಸ್ಕರ ಬಲ್ಯಾಯ, ಸುನಂದ, ಪಂಚಾಯತ್ ಸದಸ್ಯೆ ತೇಜಸ್ವಿನಿ ಪ್ರವೀಣ್, ಜನಜಾಗೃತಿ ವೇದಿಕೆ ವಲಯಧ್ಯಕ್ಷ ಹರೀಶ್ ಕುಮಾರ್, ಸಂಘದ ಕಾರ್ಯದರ್ಶಿ ರಾಜು ಪೂಜಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಬಹುಕಾಲದ ಸಮಸ್ಯೆ
ಗುಂಡೂರಿ ಗ್ರಾಮಸ್ಥರಿಗೆ ವೇಣೂರು ಪ್ರಾ.ಕೃ.ಪ.ಸ ಸಂಘದಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿತ್ತು. ಆದರೆ ಐದಾರು ಕಿ.ಮೀ. ದೂರದಿಂದ ಪಡಿತರ ಸಾಗಿಸಲು ತೊಂದರೆ ಆಗುತ್ತಿದೆ ಎಂಬ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಸಂಚಾರಿ ವಾಹನದಲ್ಲಿ ತಂದು ಪಡಿತರ ವಿತರಣೆ ಮಾಡಲಾಗುತ್ತಿತ್ತು. ಇದು ಮಳೆಗಾಲದಲ್ಲಿ ವಿತರಣೆಗೆ ಸಮಸ್ಯೆ ಆಗುತ್ತಿತ್ತು. ಮತ್ತೊಂದೆಡೆ ಸರ್ವರ್ ಕೊರತೆಯಿಂದ ಪಡಿತರ ವಿತರಣೆ ವಿಳಂಬವಾಗುತ್ತಿತ್ತು. ಈಗಾಗಿ ಇಲ್ಲಿಗೆ ಶಾಶ್ವತ ಪಡಿತರ ವಿತರಣೆ ಕೇಂದ್ರ ಆಗಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಗ್ರಾಮಸಭೆಗಳಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿತ್ತು. ಇದೀಗ ಪಡಿತರ ವಿತರಣೆಯ ಬಹುದೊಡ್ಡ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಬಹುಕಾಲದ ಸಮಸ್ಯೆಯೊಂದು ಸುಖಾಂತ್ಯ ಕಂಡಿದೆ.

ಪಂಚಾಯತ್ ಅನುದಾನದಲ್ಲಿ ಗೋಡೌನ್, ಆರಂಬೋಡಿ ಗ್ರಾ.ಪಂ.ನ ಉದ್ಯೋಗ ಖಾತರಿ ಯೋಜನೆ ಹಾಗೂ ಇನ್ನಿತ್ತರ ಅನುದಾನ ಬಳಸಿ ಕಳೆದ ೪ ವರ್ಷಗಳ ಹಿಂದೆ ಗುಂಡೂರಿಯ ತುಂಬೆದಲೆಕ್ಕಿ ಗೋಡೌನ್ ಕಟ್ಟಡವನ್ನು ನಿರ್ಮಿಸಲಾಗಿತ್ತು. ಇದೇ ಕಟ್ಟಡವನ್ನು ಇದೀಗ ಪಂಚಾಯತ್ ಪಡಿತರ ವಿತರಣೆಗೆ ನೀಡಿದ್ದು, ನ. ೧೫ರಿಂದಲೇ ಗುಂಡೂರಿ ಹಾಲು ಉ.ಸ. ಸಂಘದ ಸಿಬ್ಬಂದಿಗಳು ಪಡಿತರ ವಿತರಣೆಯಲ್ಲಿ ತೊಡಗಿದ್ದಾರೆ. ಸಂಘದ ಈ ನಿರ್ಧಾರ ಗುಂಡೂರಿ ಪಡಿತರ ಗ್ರಾಹಕರ ದೀರ್ಘಕಾಲದ ಸಮಸ್ಯೆಗೆ ಮುಕ್ತಿ ದೊರೆತಂತಾಗಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago