ಮಂಗಳೂರು

ಬೆಳ್ತಂಗಡಿ: ಕಜಕ್ಕೆ- ಎಳನೀರು ರಸ್ತೆ ನಿರ್ಮಾಣಕ್ಕೆ ಅನುಮತಿ‌ ನೀಡದಂತೆ ಮನವಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಕಜಕ್ಕೆ- ಎಳನೀರು ರಸ್ತೆ ನಿರ್ಮಾಣಕ್ಕೆ ಅನುಮತಿ‌ ನೀಡದಂತೆ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಮನವಿ ಸಲ್ಲಿಸಿದೆ.

ರಸ್ತೆ ನಿರ್ಮಾಣವಾದಲ್ಲಿ ಅದು ಸುಪ್ರೀಂಕೋರ್ಟ್‌ನ ಆದೇಶದ ಸ್ಪಷ್ಟ ಉಲ್ಲಂಘನೆಯಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ದೇಶದ ಉಚ್ಛ ನ್ಯಾಯಾಲಯವು, ಯಾವುದೇ ರಕ್ಷಿತಾರಣ್ಯ, ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ‌ ವಲಯ ಮತ್ತು ಅಭಯಾರಣ್ಯಗಳ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಬಫರ್ ಝೋನ್ ನಲ್ಲಿ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿಷೇಧಿಸಿ 2022 ರ ಜೂ.3 ರಂದು ಆದೇಶ ಹೊರಡಿಸಿದೆ.

ನ್ಯಾಯಾಲಯದ ಆದೇಶವನ್ನು‌ ಪಾಲಿಸಬೇಕಾದ ಅಗತ್ಯವಿದ್ದು, ಮಲಂವತಿಗೆ ಗ್ತಾಮದ ಕಜಕ್ಕೆ- ಎಳನೀರಿನ 0.95 ಹೆಕ್ಟೇರ್ ಪ್ರದೇಶ (4.75 ಕಿ.ಮೀ) ಬಫರ್ ಝೋನ್‌ನಲ್ಲಿ ಬರುತ್ತದೆ‌. ಹೀಗಾಗಿ‌ ಪ್ರಸ್ತಾವಿತ ರಸ್ತೆ ನಿರ್ಮಾಣ ಆದೇಶದ ಉಲ್ಲಂಘನೆಯಾಗುತ್ತದೆ ಎಂದು ಒಕ್ಕೂಟವು ಕಾರ್ಕಳದಲ್ಲಿನ ಕುದುರೆಮುಖ‌ ವನ್ಯಜೀವಿ ವಿಭಾಗದ ಕಚೇರಿಗೆ ಆ.24 ರಂದು ಮನವಿ ನೀಡಿದೆ. ಇದರ ಪ್ರತಿಯನ್ನು‌ ಬೆಳ್ತಂಗಡಿಯಲ್ಲಿನ ವನ್ಯಜೀವಿ, ಅರಣ್ಯ ಇಲಾಖಾ ಕಚೇರಿಗೂ ತಲುಪಿಸಲಾಗಿದೆ. ವನ್ಯಜೀವಿ ಇಲಾಖೆಯವರು ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.

Gayathri SG

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

10 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

43 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

1 hour ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago