ಮಂಗಳೂರು

ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಡಿ. 15 ರಂದು ಎನ್. ಪ್ರಕಾಶ್ ಕಾರಂತ್ ಅಧಿಕೃತ ಭೇಟಿ

ಬೆಳ್ತಂಗಡಿ: ರೋಟರಿ ಜಿಲ್ಲಾ ಗವರ್ನರ್ ತಮ್ಮ ವ್ಯಾಪ್ತಿಯ ಎಲ್ಲಾ ರೋಟರಿ ಕ್ಲಬ್‌ಗಳಿಗೆ ಅಧಿಕೃತ ಭೇಟಿ ಮಾಡಿ ಅಲ್ಲಿಯ ಚಟುವಟಿಕೆಗಳನ್ನು ವೀಕ್ಷಿಸುವುದು ವಾಡಿಕೆ. ಅದರಂತೆ ಈ ವರ್ಷ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಎನ್ ಪ್ರಕಾಶ್ ಕಾರಂತ್ ಅವರು ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಡಿ. 15 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ಅಂದು ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮಾ ರಾವ್ ಹೇಳಿದರು. ಬೆಳ್ತಂಗಡಿ ಪ್ರೆಸ್‌ಕ್ಲಬ್ ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

51 ವರ್ಷಗಳ ಇತಿಹಾಸವಿರುವ ರೋಟರಿ ಕ್ಲಬ್ ಬೆಳ್ತಂಗಡಿ ನಾನಾ ಕಾರ್ಯಕ್ರಮಗಳ ಮೂಲಕ ತನ್ನನ್ನು ಗುರುತಿಸಿಕೊಂಡಿದೆ. ದ. ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರಗಳನ್ನೊಳಗೊಂಡ ರೋಟರಿ ಜಿಲ್ಲೆ 3181ರ 2022-23ನೇ ಸಾಲಿನ ಜಿಲ್ಲಾ ಗವರ್ನರ್ ನಮ್ಮ ಜಿಲ್ಲೆಯವರೇ ಆದ ರೊ. ಎನ್. ಪ್ರಕಾಶ್ ಕಾರಂತರು, ಇವರ ಮಾರ್ಗದರ್ಶನದಲ್ಲಿ ರೋಟರಿ ಜಿಲ್ಲೆಯಾದ್ಯಂತ ಇರುವ ಎಲ್ಲಾ ಕ್ಲಬ್‌ಗಳು ಈ ವರ್ಷ ಜಲಸಿರಿ, ವನಸಿರಿ, ಆರೋಗ್ಯಸಿರಿ ಹಾಗೂ ವಿದ್ಯಾಸಿರಿ ಯೋಜನೆಯಡಿಯಲ್ಲಿ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿವೆ. ಆ ದಿನ ಅವರು ಬೆಳಿಗ್ಗೆ 9-30 ಗಂಟೆಗೆ ರೋಟರಿ ಸೇವಾಭವನದಲ್ಲಿ ಕ್ಲಬ್‌ನ ನಿರ್ದೇಶಕ ಮಂಡಳಿ ಹಾಗೂ ಸದಸ್ಯರನ್ನೊಳಗೊಂಡ ಕ್ಲಬ್ ಅಸೆಂಬ್ಲಿಯನ್ನು ನಡೆಸಲಿದ್ದಾರೆ.

ಕ್ಲಬ್ ವಿದ್ಯಾಸಿರಿ ಯೋಜನೆಯಡಿಯಲ್ಲಿ ಸೆಲ್ಕೋ ಹಾಗೂ ದಾನಿಗಳ ನೆರವಿನೊಂದಿಗೆ ಗುರುವಾಯನಕೆರೆ ಸರಕಾರಿ ಹಸ್ತಾಂತರಿಸಿದ್ದಾರೆ. ಪ್ರಾಥಮಿಕ ಶಾಲೆಗೆ ನೀಡಲಿರುವ ಸ್ಮಾರ್ಟ್ ಕ್ಲಾಸ್‌ನ್ನು ಶಾಲೆಗೆ ಹಸ್ತಾಂತರಿಸಲಿದ್ದಾರೆ.

ಅರಣ್ಯ ಇಲಾಖೆ ಹಾಗೂ ಕಾಲೇಜಿನ ರೆಡ್ ಕ್ರಾಸ್ ವಿಭಾಗದೊಂದಿಗೆ ಜಂಟಿಯಾಗಿ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಆವರಣದಲ್ಲಿ ರೋಟರಿ ಕ್ಲಬ್ ವನಸಿರಿ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಿರುವ ವೃಕ್ಷವಾಟಿಕಾ ಆರ್ಬೋರೇಟಂ ಕೆಲಸಗಳಿಗೆ ಚಾಲನೆ ನೀಡಲಿದ್ದಾರೆ.

ಆರೋಗ್ಯ ಸಿರಿ ಯೋಜನೆಯಡಿಯಲ್ಲಿ 15 ಆಯ್ದ ಅರ್ಹ ಫಲಾನುಭವಿಗಳಿಗೆ ರೋಟರಿ ಸೇವಾಭವನದಲ್ಲಿ ಗಾಲಿ ಕುರ್ಚಿಗಳನ್ನು ವಿತರಿಸಲಿದ್ದಾರೆ.

ಅದೇ ದಿನ ಅಪರಾಹ್ನ 12-15 ಗಂಟೆಗೆ ಕಾಶಿಬೆಟ್ಟು ಅರಳಿಯ ರೋಟರಿ ಸಭಾ ಭವನದಲ್ಲಿ ಬೆಳ್ತಂಗಡಿ ಪತ್ರಕರ್ತರ ಸಂಘದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಂಜೆ 7ಕ್ಕೆ ಉಜಿರೆಯ ಓಷ್ಯನ್ ಪರ್ಲ್ ಹೋಟೇಲ್‌ ಸಭಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ವಲಯ IV ರ ಸಹಾಯಕ ಗವರ್ನರ್ ರೋ. ಮೇಜರ್ ಡೋನರ್ ಮೇಜರ್ ಜನರಲ್ ಎಂ.ವಿ.ಭಟ್ (ನಿವೃತ್ತ) ಹಾಗೂ ವಲಯ ಸೇನಾನಿ ರೊ. ಶರತ್ ಕೃಷ್ಣ ಪಡ್ಡೆಟ್ನಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರಕ್ಷಾ ರಾಗ್ನೇಶ್, ನಿಯೋಜಿತ ಅಧ್ಯಕ್ಷ ಮಚ್ಚಿಮಲೆ ಅನಂತ ಭಟ್, ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು, ಮಾಜಿ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಉಪಸ್ಥಿತರಿದ್ದರು.

Gayathri SG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

12 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

29 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

57 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago