News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: 365 ಸರ್ಕಾರಿ ಶಾಲೆಗಳಿಗೆ ಎರಡೂವರೆ ಕೋಟಿ ರೂ. ಮೊತ್ತದ ಪೀಠೋಪಕರಣ ವಿತರಿಸಿದ ಹೆಗ್ಗೆಡೆ

Rs 2.5 crore allocated to 365 government schools Heggade distributes furniture worth Rs 1,000 crore
Photo Credit : By Author

ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ ಮಹತ್ವಪೂರ್ಣ ಹಾಗೂ ಭದ್ರ ಬುನಾದಿಯಾಗಿದ್ದು ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪ್ರತಿವರ್ಷ ಸುಮಾರು 400 ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯಗಳ ನಿರ್ಮಾಣ, ಶಿಕ್ಷಕರ ನೇಮಕಾತಿ, ಶಾಲಾ ಕಟ್ಟಡ ನಿರ್ಮಾಣ, ಆವರಣ ಗೋಡೆ, ಆಟದ ಮೈದಾನ ರಚನೆ, ಕ್ರೀಡಾ ಸಾಮಾಗ್ರಿಗಳ ಪೂರೈಕೆ ಮೊದಲಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗೆಡೆಯವರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಗ್ರಾಮೀಣ ಪ್ರದೇಶದ 365 ಸರ್ಕಾರಿ ಶಾಲೆಗಳಿಗೆ ಎರಡೂವರೆ ಕೋಟಿ ರೂ. ಮೊತ್ತದ 2770 ಜೊತೆ ಪೀಠೋಪಕರಣಗಳನ್ನು ವಿತರಿಸಿ ಮಾತನಾಡಿದರು.

ಪ್ರಸ್ತುತ ದೀರ್ಘ ಬಾಳಿಕೆ ಬರುವ ಹಾಗೂ ಹಗುರವಾದ ಫೈಬರ್ ಬೆಂಚು, ಡೆಸ್ಕ್‍ಗಳನ್ನು ಧರ್ಮಸ್ಥಳದ ವತಿಯಿಂದಲೆ ಶಾಲೆಗಳಿಗೆ ಸಾಗಾಟ ಮಾಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಈ ವರೆಗೆ 10,334 ಶಾಲೆಗಳಿಗೆ 65,144 ಜೊತೆ ಬೆಂಚು, ಡೆಸ್ಕ್‍ಗಳನ್ನು ಪೂರೈಸಿದ್ದು ಇದಕ್ಕಾಗಿ 21 ಕೋಟಿ 22 ಲಕ್ಷ ರೂ. ಪೂರಕ ಅನುದಾನ ನೀಡಲಾಗಿದೆ ಎಂದು ಹೆಗ್ಗಡೆಯವರು ತಿಳಿಸಿದರು.

ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್. ಹೆಚ್. ಮಂಜುನಾಥ್, ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಸಮುದಾಯ ಅಭಿವೃದ್ಧಿ ವಿಭಾಗದ ಆನಂದ ಸುವರ್ಣ ಮತ್ತು ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು