Categories: ಮಂಗಳೂರು

ಬೆಳ್ತಂಗಡಿ: ಸತ್ಕರ್ಮಗಳ ಮೂಲಕ ನಡೆದರೆ ಲೋಕ ಕಲ್ಯಾಣ ಆಗುವುದು ಎಂದ ಸರಸ್ವತಿ ಸ್ವಾಮೀಜಿ

ಬೆಳ್ತಂಗಡಿ: ಕರ್ಮಯೋಗ ಮಾಡುವಾಗ ಯಾರಿಗೂ ಹಿಂಸೆಯಾಗದಂತೆ ಅಂತರ್ಶುದ್ದಿಯಿಂದ ಮಾಡಬೇಕು. ಯಾರಿಗೂ ಹಿಂಸೆ ನೋವು ಕೊಡದೆ ಬದುಕಬೇಕು. ತ್ಯಾಗದಿಂದ ಕರ್ಮ ಮಾಡಿದಾಗ ಮೋಕ್ಷ ಪ್ರಾಪ್ತಿಯಾಗಲಿದೆ. ಗೌರವವನ್ನು ಹೆಚ್ಚಿಸುವ ಕೆಲಸ ಮಾಡುತ್ತಾ ಅಹಿಂಸೆ,ಸತ್ಕರ್ಮಗಳ ಮೂಲಕ ನಡೆದರೆ ಲೋಕ ಕಲ್ಯಾಣ ಆಗುವುದು ಎಂದು ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು.

ಸೆ.3ರಂದು ಶ್ರೀಗುರುದೇವ ಮಠದಲ್ಲಿ ಜರಗಿದ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಂ ನಿತ್ಯಾನಂದ ನಗರ ಧರ್ಮಸ್ಥಳ ಇಲ್ಲಿನ‌ ಶ್ರೀ ಜಗದ್ಗುರು ಮಹಾಸಂಸ್ಥಾನದ ಪೀಠದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 14 ನೇ ಪಟ್ಟಾಭಿಷೇಕ ವರ್ಧ್ಯಂತ್ಯುತ್ಸವ ಕಾರ್ಯಕ್ರಮ ಅವರು ಆಶೀರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜಾತಿ,ಧರ್ಮ, ರಾಜಕೀಯ ಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಾರತ ಕೃಷಿ ಮತ್ತು ಋಷಿ ಸಂಸ್ಕೃತಿಗಾಗಿ ಪ್ರಸಿದ್ದಿ ಪಡೆದಿದೆ. ಪರಮಾತ್ಮ ಮತ್ತು ಜೀವಾತ್ಮದ‌ ನಡುವಿನ ಸೇತುವೆಯಂತಿರುವವರು ಗುರುಗಳು. ಧರ್ಮದ ಕೇಂದ್ರಗಳು ಮನುಕುಲಕ್ಕೆ ಬೆಳಕಾಗಬೇಕು ಎಂದರು.

ಸಮಾರಂಭಕ್ಕೆ ಸಂಸದ ಹಾಗೂ ರಾಜ್ಯ‌ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಶಾಸಕ‌ ಹಾಗೂ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹರೀಶ್ ಕುಮಾರ್, ಮಂಗಳೂರು ಗರೋಡಿಯ ಚಿತ್ತರಂಜನ್,ಬಿಜೆಪಿ ಮಂಡಲದ‌ ಅಧ್ಯಕ್ಷ ಜಯಂತ ಕೋಟ್ಯಾನ್, ಭುಜಬಲಿ ಧರ್ಮಸ್ಥಳ, ಪಿ.ಕೆ ರಾಜು ಪೂಜಾರಿ ಕಾಶಿಪಟ್ಣ,ಅಣ್ಣಿ ಪೂಜಾರಿ,ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ರವೀಂದ್ರ ಆರ್ಲ, ಸೀತಾರಾಮ ಬಿ.ಎಸ್, ಕಾರ್ಪೋರೇಟರ್ ಕಿರಣ್‌ ಕುಮಾರ್, ಅಶೋಕ ಕುಮಾರ್ ಚಿಕ್ಕಮಗಳೂರು, ಭಾಸ್ಕರ ಧರ್ಮಸ್ಥಳ, ಆರ್.ಜಿ ನಾಯ್ಕ್ ಕುಮುಟ,ಶೇಖರ ಬಂಗೇರ ಮುಂಬೈ, ಕೃಷ್ಣಪ್ಪ ಗುಡಿಗಾರ, ಕೃಷ್ಣಪ್ಪ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ಟ್ರಸ್ಟಿ ತುಕರಾಮ‌ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಹಿರಿಯ ಪತ್ರಕರ್ತ ಆರ್.ಎನ್. ಪೂವಣಿ ಅವರನ್ನು ಸ್ವಾಮೀಜಿ ಗೌರವಿಸಿದರು.

Ashika S

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

15 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

28 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

51 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago