News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ ಪಿ. ಡೀಕಯ್ಯ ನಿಧನ

Senior leader of bahujan movement P. Dekayya passes away
Photo Credit :

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ(63) ನವರು ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸುವುದರಲ್ಲಿ ಡೀಕಯ್ಯ ಅವರ ಪಾತ್ರ ಅತ್ಯಂತ ಹಿರಿದು. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸಿ ಅವರು ಚಳವಳಿಯನ್ನು ಕಟ್ಟಿದವರು. ಪಿ.ಡೀಕಯ್ಯನವರು, ದೇಶದ ಇತಿಹಾಸದ ಜೊತೆಗೆ ತುಳುನಾಡಿನ ಇತಿಹಾಸವನ್ನೂ ಅರೆದು ಕುಡಿದಿದ್ದರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಬಹುಜನ ಚಳವಳಿಯನ್ನು ಕಟ್ಟಿದವರು.

ಅವರು ಸಾಕಷ್ಟು ಯುವ ನಾಯಕರನ್ನು ಸೃಷ್ಟಿಸಿದ್ದರು. ಕಾನದ ಕಟದರ ಇತಿಹಾಸದ ಕುರಿತು ಅಧ್ಯಯನ ಮಾಡಿ ಪುಸ್ತಕ ಬರೆದಿದ್ದ, ಡೀಕಯ್ಯರು ಅಪ್ರತಿಮ ಬರಹಗಾರರು ಕೂಡ ಆಗಿದ್ದರು. ಅವರ ಬರಹಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಮನುವಾದದ ಕಡು ವಿರೋಧಿಯಾಗಿದ್ದ ಡೀಕಯ್ಯರು, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಬಿ.ಎಸ್.ಎನ್ ಎಲ್. ನ ಉದ್ಯೋಗಿಯಾಗಿ ನಿವೃತ್ತರಾಗಿದ್ದರು. ತುಳುನಾಡ ಮನ್ಸ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಂಘಟನೆಯನ್ನು ಕಟ್ಟಿದ್ದರು.

ಅವರು ಪತ್ನಿ ಹಿರಿಯ ಸಾಹಿತಿ ಅತ್ರಾಡಿ ಅಮೃತಾಶೆಟ್ಟಿ, ಕುಟುಂಬ ವರ್ಗದವರು ಹಾಗೂ ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.

ಸಾವಿನಲ್ಲೂ ಸಾರ್ಥಕತೆ;

ಮೆದುಳಿನ ರಕ್ತ ಸ್ರಾವದಿಂದ ಡೀಕಯ್ಯ ಅವರು ಮೃತಪಟ್ಟಿದ್ದು ಕುಟುಂಬಸ್ಥರು ಅವರ ಅಂಗಾಂಗಗಳನ್ನು ದಾನ ಮಾಡಿ ಹಲವರ ಬದುಕಿಗೆ ದಾರಿ ತೋರಿದ್ದಾರೆ. ಅವರ ಅಂಗಾಗಳ ದಾನದ ಪ್ರಕ್ರಿಯೆಗಳು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು