Categories: ಮಂಗಳೂರು

ಬೆಳ್ತಂಗಡಿ: ಭಾರಿ ಗಾತ್ರದ ಮರ ಉರುಳಿ ಬಿದ್ದು ಟ್ರಾನ್ಸ್ ಫಾರ್ಮರ್ ಸಹಿತ 7 ಕರೆಂಟ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆಯಾಗುತಿದ್ದು ಲಾಯಿಲ ಹಾಗೂ ನಡ ಗ್ರಾಮದ ಗಡಿ ಪ್ರದೇಶದ ಅಗಳಿ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆ ತಡೆಯಾಗಿದ್ದಲ್ಲದೇ ಟ್ರಾನ್ಸ್ ಫಾರ್ಮರ್ ಸಹಿತ ಸುಮಾರು 7 ಕ್ಕಿಂತಲೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿ ಸಂಭವಿಸಿದೆ.

ಈ ಬಗ್ಗೆ ಮಾಹಿತಿ ಪಡೆದ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಉಪಾಧ್ಯಕ್ಷ ಗಣೇಶ್ ಆರ್. ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ, ಜಯಂತಿ ಅನ್ನಡ್ಕ ಸ್ಥಳಕ್ಕೆ ಭೇಟಿ ನೀಡಿದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಮಿಸಿ ದೊಡ್ಡ ಗಾತ್ರದ ಮರವಾದ್ದರಿಂದ ಯಂತ್ರದ ಮೂಲಕ ತೆರವುಗೊಳಿಸುವ ಬಗ್ಗೆ ತಿಳಿಸಿದ್ದು ತಕ್ಷಣ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ತೆರವಿಗೆ ಕ್ರಮ ಕೈಗೊಂಡು ಜೆಸಿಬಿಯ ಮೂಲಕ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

ಮರ ತೆರವು ಸಂದರ್ಭ ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಾಧ್ಯಕ್ಷ ಗಣೇಶ್ ಆರ್. ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಸ್ಥಳದಲ್ಲಿದ್ದರು.ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಪರಿಶೀಲಿಸಿ ಹಾನಿಗೊಳಗಾದ ವಿದ್ಯುತ್ ಕಂಬಗಳ ದುರಸ್ತಿಗೆ ಕ್ರಮ ಕೈಗೊಂಡಿದ್ದಾರೆ.

ಭಾರೀ ಮಳೆ ಬರುತಿದ್ದರೂ ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಗ್ರಾಮ ಪಂಚಾಯಿತಿ ಲಾಯಿಲ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago