Categories: ಮಂಗಳೂರು

ಬೆಳ್ತಂಗಡಿ: ಶಿಶುಮಂದಿರ ಸುಲ್ಕೇರಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಬೆಳ್ತಂಗಡಿ: ಅನುದಾನಿತ ಖಾಸಗಿ ಕಿರಿಯ ಪ್ರಾಥಮಿಕ, ಶ್ರೀರಾಮ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಶಿಶುಮಂದಿರ ಸುಲ್ಕೇರಿ ಇದರ ಸಾಂಸ್ಕೃತಿಕ ವೈಭವ ಶನಿವಾರ ಸಂಜೆ ನಡೆಯಿತು.

ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು, ನಮ್ಮ ದೇಶದ ಮೂಲಚಿಂತನೆಗಳಿಗೆ, ಮೌಲ್ಯಗಳಿಗೆ, ಧರ್ಮ, ಸಂಸ್ಕೃತಿಗೆ ಹೊಡೆತ ಬೀಳುತ್ತಿರುವಂತಹ ಕಾಲಘಟ್ಟದಲ್ಲಿ ಮಕ್ಕಳಿಗೆ ಸಂಸ್ಕಾರ ಭರಿತ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಈ ಶಾಲೆಯನ್ನು ಆರಂಭಿಸಲಾಗಿದೆ. ಯಾವುದನ್ನು ನಾವು ಶಿಕ್ಷಣದ ಮೂಲಕ ಕೊಡಬೇಕಾಗಿತ್ತೋ ಅದನ್ನು ಕೊಡದೇ ಇರುವುದರಿಂದ ಇಡೀ ಸಮಾಜವೇ ದೂರವಾಗುತ್ತಿದೆ ಎಂದರು.

ಜಗತ್ತಿಗೆ ಶಾಂತಿ ಸಿಗುವುದಾದರೆ ಅದು ಭಾರತದಿಂದ ಎಂದು ವಿದೇಶದವರೂ ಹೇಳುತ್ತಿದ್ದಾರೆ. ಹೀಗಾಗಿ ಶಾಂತಿ ಮಾತುಕತೆಯ ಸಾಮರ್ಥ್ಯವನ್ನು ನಾವು ಬೆಳೆಸಿಕೊಳ್ಳಬೇಕು ಎಂದರು.

ಸತ್ಯದೇವತೆ ದೈವಸ್ಥಾನದ ಆಡಳಿತೆದಾರ ಶಿವಪ್ರಸಾದ ಅಜಿಲ, ನಿಟ್ಟೆ ವಿ.ವಿ.ಯ ನಿರ್ದೇಶಕ ಯೋಗೀಶ್ ಹೆಗ್ಡೆ, ಕರ್ನಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಬಿ.ಚಂದ್ರಶೇಖರ ರಾವ್, ಉದ್ಯಮಿ ಪ್ರಶಾಂತ ಶೆಟ್ಟಿ, ವೇಣೂರು ಸಿ.ಎ.ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಡಾ| ಗೋಪಾಲಕೃಷ್ಣ ಭಟ್, ಡಾ|ಎನ್.ಎಂ.ತುಳಪುಳೆ, ಸುಲ್ಕೇರಿ ಗ್ರಾ.ಪಂ.ಅಧ್ಯಕ್ಷ ನಾರಾಯಣ ಪೂಜಾರಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಕೋಶಾಧ್ಯಕ್ಷ ಅಚ್ಯುತ ನಾಯಕ್ ಅಭ್ಯಾಗತರಾಗಿದ್ದರು. ಶಾಲಾ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಕಾರ್ಯದರ್ಶಿ ಶಶಿಧರ ಶೆಟ್ಟಿ ಅಳದಂಗಡಿ ಉಪಸ್ಥಿತರಿದ್ದರು.

ಅಧ್ಯಕ್ಷ ರಾಜು ಪೂಜಾರಿ ಸ್ವಾಗತಿಸಿದರು. ಉಪಾಧ್ಯಕ್ಷ ಚಂದ್ರಕಾಂತ ಗೋರೆ ವಂದಿಸಿದರು. ಕೋಶಾಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರ್ವಹಿಸಿದರು.

Sneha Gowda

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

10 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

12 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

16 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

26 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

32 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

47 mins ago