Categories: ಮಂಗಳೂರು

ಬೆಳ್ತಂಗಡಿ: ಸೋಮನಾಥ್ ನಾಯಕ್ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಕ್ಷೇತ್ರದ ಸಂಸ್ಥೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಅವಮಾನಕರ ಬರವಣಿಗೆ ಮತ್ತು ಹೇಳಿಕೆ ನೀಡಿದ ಪ್ರಕರಣ ಸಂಬಂಧ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಸಜೆ ಹಾಗೂ 4.5 ಲಕ್ಷ ರೂಪಾಯಿ ಪರಿಹಾರ ನೀಡಲು ಬೆಳ್ತಂಗಡಿ ನ್ಯಾಯಾಲಯ ಈ ಹಿಂದೆ ಆದೇಶ ಮಾಡಿದ್ದು, ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಸೋಮನಾಥ ನಾಯಕ್ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ಮತ್ತು ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ನ್ಯಾಯಾಲಯಗಳಲ್ಲಿ ಸೋಮನಾಥ್ ನಾಯಕ್‌ರ ಮೇಲ್ಮನವಿಗಳು ತಿರಸ್ಕಾರಗೊಂಡ ಹಿನ್ನೆಲೆಯಲ್ಲಿ ಸೋಮನಾಥ ನಾಯಕ್ ಅಕ್ಟೋಬರ್ 31ರಂದು ಅಪರಾಹ್ನ ಗಂಟೆ 2-30ಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಬಂದು, ನಂತರ ತನ್ನ ವಕೀಲರೊಂದಿಗೆ 3ಗಂಟೆಗೆ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಧೀಶರಾದ ವಿಜಯೇಂದ್ರ ಮುಂದೆ ಹಾಜರಾದರು.

ಬೆಳ್ತಂಗಡಿ ಕೋರ್ಟ್‌ಗೆ ಸೋಮನಾಥ ನಾಯಕ್ ಶರಣಾಗುವ ವೇಳೆ ಸಾಕಷ್ಟು ಮಂದಿ ಬೆಂಬಲಿಗರು ಹಾಗೂ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ, ಚಿಂತಕರಾದ ಲಕ್ಷ್ಮೀಶ ತೋಳ್ಪಡಿತ್ತಾಯ, ನಾಗರಿಕ ಸೇವಾ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ರಂಜನ್ ರಾವ್ ಯರ್ಡೂರು, ಡಿಎಸ್ಎಸ್ ಮುಖಂಡರು ಹಾಗೂ ಮತ್ತಿತರ ಸಂಘಟನೆಯ ಕಾರ್ಯಕರ್ತರು ಜೊತೆಯಲ್ಲಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಥವಾ ಕ್ಷೇತ್ರದ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವಂತ ಅವಹೇಳನಕಾರಿ ಮತ್ತು ಅವಮಾನಕರ ಬರವಣಿಗೆ ಅಥವಾ ಹೇಳಿಕೆಗಳನ್ನು ಪತ್ರಿಕೆ, ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ನೀಡಬಾರದೆಂದು ಬೆಳ್ತಂಗಡಿ ನ್ಯಾಯಾಲಯ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಸೋಮನಾಥ ನಾಯಕ್ ಸೇರಿದಂತೆ ಐದು ಜನರಿಗೆ ಈ ಹಿಂದೆ ಆದೇಶ ಮಾಡಿತ್ತು. ಆದರೆ ಅದನ್ನು ಮೀರಿ ಮತ್ತೆ ಸೋಮನಾಥ ನಾಯಕ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಅವಮಾನಕರ ಸುದ್ದಿ ವೈರಲ್ ಮಾಡಿರುವುದಕ್ಕಾಗಿ ಬೆಳ್ತಂಗಡಿ ನ್ಯಾಯಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.

ವಿಚಾರಣೆ ನಡೆಸಿದ ಬೆಳ್ತಂಗಡಿ ನ್ಯಾಯಾಲಯ ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿ ಮೂರು ತಿಂಗಳ ಸಜೆ ಮತ್ತು 4.5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಆದೇಶ ಮಾಡಿತ್ತು. ಅದಲ್ಲದೆ ಸೋಮನಾಥ ನಾಯಕ್‌ಗೆ ಸೇರಿದ ಆಸ್ತಿ ಸಹ ಮುಟ್ಟುಗೋಲು ಹಾಕಿಕೊಳ್ಳಲು ಸೂಚಿಸಿತ್ತು. ಬೆಳ್ತಂಗಡಿ ನ್ಯಾಯಲಯದ ಆದೇಶ ವಿರುದ್ಧ ಸೋಮನಾಥ ನಾಯಕ್ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯಲ್ಲಿ, ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯದಲ್ಲಿ ವಕೀಲರ ಮೂಲಕ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ಎಲ್ಲಾ ನ್ಯಾಯಾಲಯಗಳು ಸೋಮನಾಥ ನಾಯಕ್‌ರ ಮೇಲ್ಮನವಿ ವಜಾ ಮಾಡಿ ಬೆಳ್ತಂಗಡಿ ನ್ಯಾಯಾಲಯದ ಮೊದಲು ನೀಡಿದ್ದ ಅದೇಶವನ್ನು ಎತ್ತಿಹಿಡಿದಿತ್ತು. ಇದೀಗ ನ್ಯಾಯಾಲಯದ ಆದೇಶದಂತೆ ನ್ಯಾಯಾಲಯಕ್ಕೆ ಶರಣಾದ ಸೋಮನಾಥ ನಾಯಕ್ ತನಗೆ ನ್ಯಾಯಾಲಯ ವಿಧಿಸಿದ 4.5ಲಕ್ಷ ರೂಪಾಯಿ ದಂಡದ ಮೊತ್ತವನ್ನು 90ದಿನಗಳ ಒಳಗೆ ಪಾವತಿಸುವುದಾಗಿ ತನ್ನ ನ್ಯಾಯವಾದಿಯ ಮೂಲಕ ನ್ಯಾಯಾಲಯಕ್ಕೆ ಮನವಿ‌ ಮಾಡಿದ್ದು, ಈ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಬೆಳ್ತಂಗಡಿ ಕೋರ್ಟ್‌ನಿಂದ ಸೋಮನಾಥ್ ನಾಯಕ್ ಅವರನ್ನು ಬೆಳ್ತಂಗಡಿ ನ್ಯಾಯಾಲಯದ ಅಮೀನರು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago