Categories: ಮಂಗಳೂರು

ಬೆಳ್ತಂಗಡಿ: ತುಳು ಶಿವಳ್ಳಿ ಧರ್ಮಸ್ಥಳ ವಲಯದ ನೂತನ ಅಧ್ಯಕ್ಷರಾಗಿ ಶ್ರೀಪತಿ ಅರ್ಮುಡತ್ತಾಯ ಆಯ್ಕೆ

ಬೆಳ್ತಂಗಡಿ: ರಥ ಮುನ್ನಡೆಯಲು ಸಮರ್ಥ ಸಾರಥಿ, ಕುದುರೆ ಎಲ್ಲ ಬೇಕು. ಪಲ್ಲಕಿ ಹೊರಲು ಏಕಮನಸ್ಸಿನ ಸಮರ್ಥ ಯುವಕರು ಬೇಕು. ಅಂತೆಯೇ ಸಂಘಟನೆ ಬಲಿಷ್ಠಗೊಳ್ಳಲು ಎಲ್ಲರೂ ಏಕಮನಸ್ಸಿನ ಸದೃಢರಾಗಿರಬೇಕು. ಎಲ್ಲರ ಸಹಕಾರವಿದ್ದರೆ ಮಾತ್ರ ಸಂಘಟನೆ ಮುನ್ನಡೆಯುವುದು ಎಂದು ತುಳು ಶಿವಳ್ಳಿ ಧರ್ಮಸ್ಥಳ ವಲಯದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ರೀಪತಿ ಅರ್ಮುಡತ್ತಾಯ ಹೇಳಿದರು.

ಅವರು ಸೆ.28ರಂದು ಧರ್ಮಸ್ಥಳದ ಗೌರಿ ಶಂಕರ ಕೃಪದಲ್ಲಿ ನಡೆದ ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ನೂತನ ತಂಡದ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ನಡೆಸುವುದಾಗಿಯೂ ,ಮುಂದಿನ ಸಭೆಯು ನ . 26ರಂದು ಮುಂಡ್ರು ಪ್ಪಾಡಿ ಭಾಸ್ಕರ ರಾವ್ ಅವರ ಮನೆಯಲ್ಲಿ ನಡೆಯಲಿದ್ದು ಎಲ್ಲರೂ ಭಾಗವಹಿಸುವಂತೆ ವಿನಂತಿಸಿಕೊಂಡರು.

ತಾಲೂಕು ಉಪಾಧ್ಯಕ್ಷ ನಾಗೇಶ್ ರಾವ್ ಅವರು ಅಧ್ಯಕ್ಷ ಹಾಗು ಕೋಶಾಧಿಕಾರಿ ಗಣೇಶ್ ಭಟ್ ಅವರಿಗೆ ಪ್ರಮಾಣವಚನ ಬೋಧಿಸಿ ಶುಭ ಕೋರಿದರು. ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ನೂರಿತ್ತಾಯ ತನ್ನ ಅಧ್ಯಕ್ಷಾವಧಿಯಲ್ಲಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುವೆಟ್ನಾಯ ಗತ ಸಭೆಯ ವರದಿ ಮಂಡಿಸಿದರು. ಮುಖ್ಯ ಅತಿಥಿ ಕ್ಷೇತ್ರದ ಮಣೆಗಾರ್ ವಸಂತ ಮಂಜಿತ್ತಾಯ ಅವರು ವಲಯದ ಪ್ರತಿ ಸದಸ್ಯರೂ ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಿ,ಹೊಸ ಕಾರ್ಯಕ್ರಮ, ಆರೋಗ್ಯ ಶಿಬಿರ, ಕ್ಯಾನ್ಸರ್ ಬಗ್ಗೆ ಮಾಹಿತಿ ಶಿಬಿರ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಿ ಸದಾ ಚಟುವಟಿಕೆಯಿಂದಿರಬೇಕು ಎಂದರು.

ಗೌರವಾಧ್ಯಕ್ಷ ಗಿರೀಶ್ ಕುದ್ರೆನ್ತಯ ವಲಯದ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಕೋರಿದರು. ತುಳು ಶಿವಳ್ಳಿ ವಲಯದ ಕಾರ್ಯದರ್ಶಿ ಮುರಳಿಕೃಷ್ಣ ಆಚಾರ್ ಹರಿಹರಾನುಗ್ರಹ ಸಭಾಭವನದ ಉದ್ಘಾಟನಾ ಕಾರ್ಯಕ್ರಮದ ಬಗೆಗೆ ಮಾಹಿತಿ ನೀಡಿ ಸಂಘಟನೆ ಬಲಗೊಳ್ಳಲು ಕ್ರಿಯಾಶೀಲ ವ್ಯಕ್ತಿತ್ವ,ಮನಮುಟ್ಟುವ ಕಾರ್ಯಕ್ರಮದಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಹಾಗು ಆರ್ಥಿಕತೆಯಲ್ಲಿ ಕೈಗನ್ನಡಿ ಅವಶ್ಯವೆಂದರು. ವಲಯಾಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿದ ಸುಬ್ರಹ್ಮಣ್ಯ ನೂರಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅದೃಷ್ಟ ಸದಸ್ಯರಾಗಿ ಆಯ್ಕೆಯಾದ ಉಮೇಶ್ ಅಡಿಗರಿಗೆ ಬಹುಮಾನ ವಿತರಿಸಲಾಯಿತು. ಅನರ್ಘ್ಯ ಪ್ರಾರ್ಥಿಸಿ,ಸುಮಾ ಮಂಜಿತ್ತಾಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಗಣೇಶ್ ಭಟ್ ವಂದಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago