ಮಂಗಳೂರು

ಬೆಳ್ತಂಗಡಿ: ದೇಶದ ಏಕತೆಗೆ ತೊಂದರೆ ಮಾಡುವ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಬೆಳ್ತಂಗಡಿ: ದೇಶದ ಏಕತೆ, ಸಮಗ್ರತೆ ಹಾಗೂ ಭದ್ರತೆಯ ದೃಷ್ಟಿಯಲ್ಲಿ ಕೇಂದ್ರ ಸರಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧಿಸಿ, ಸರಿಯಾದ ಕ್ರಮ ಕೈಗೊಂಡಿರುವ ಬಿಜೆಪಿ ನೇತೃತ್ವದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅಭಿನಂದಿಸಿದ್ದಾರೆ.

ಅವರು ಸೆ.28 ರಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದ ಏಕತೆಗೆ ತೊಂದರೆ ಮಾಡುವ ಯಾವುದೇ ರೀತಿಯ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.ಅದಕ್ಕಾಗಿ ಸರಕಾರವನ್ನು ಪ್ರಧಾನಮಂತ್ರಿಯನ್ನು ಗೃಹಮಂತ್ರಿಯವರನ್ನು ಅಭಿನಂದಿಸುತ್ತೇನೆ.8 ವರ್ಷಗಳ ಹಿಂದೆ ಅಧಿಕಾರ ಪಡೆದುಕೊಂಡ ಬಿಜೆಪಿಯ ಕೇಂದ್ರ ಸರಕಾರ ಜಗತ್ತಿನಲ್ಲಿಯೇ ಒಪ್ಪಿಕೊಳ್ಳುವಂತಹ ಕ್ರಮ ಕೈಗೊಂಡು ಸಮಾಜದಲ್ಲಿ ಶಾಂತಿ,ಸಾಮರಸ್ಯ,ನಂಬಿಕೆಗೆ ತಕ್ಕ ಕೆಲಸ ಮಾಡಿದೆ.ಪಿ.ಎಫ್.ಐ ದೇಶದ ಶಾಂತಿಗೆ ಸಾಮರಸ್ಯಕ್ಕೆ ಅಡ್ಡಿಯುಂಟು ಮಾಡುವ ಮೂಲಕ ಬೇರೆ-ಬೇರೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನಗಳಿಗೆ ಭಯದ ವಾತಾವರಣ ಸೃಷ್ಟಿಸಿ ದೇಶದ ಎಲ್ಲಾ ಕಡೆ ಸಂಘಟಿತವಾಗಿ ಶಾಂತಿ ಕೆಡಿಸುವ ಕೆಲಸ ಮಾಡಿದೆ.

ಪ್ರವೀಣ್ ನೆಟ್ಟಾರ್ ಕೊಲೆಯ ಹಿಂದೆ ಕೂಡ ವ್ಯವಸ್ಥಿತ ಸಂಚು ಇದೆ.ದೇಶದ ಕೇರಳ,ಅಸ್ಸಾಂ,ಆಂದ್ರ,ತಮಿಳುನಾಡು ಮೊದಲಾದ ರಾಜ್ಯಗಳ ಮೂಲಕ ವಿದೇಶದಲ್ಲಿಯೂ ಸಂಘಟನೆಯು ಸಂಬಂಧ ಇಟ್ಟುಕೊಂಡ ಗುಮಾನಿಯಲ್ಲಿ ರಾಷ್ಟ್ರೀಯ ತನಿಖಾದಳ ದೇಶದಾದ್ಯಂತ ದಾಳಿ ನಡೆಸಿ ಸಾಕ್ಷಿ ಸಂಗ್ರಹಿಸಿ ರಾಜ್ಯದ ಪೋಲೀಸರಿಂದ ಮುಂಜಾಗ್ರತ ಕ್ರಮ ಕೈಗೊಂಡು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಿದೆ. ಕೇಂದ್ರದ ಮತ್ತು ರಾಜ್ಯದ ಬಿಜೆಪಿ ಸರಕಾರ ಅಭಿವೃದ್ಧಿಯನ್ನು ಮೂಲ ಮಂತ್ರವಾಗಿ ಇಟ್ಟುಕೊಂಡು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಮೂಲ ಸೌಕರ್ಯವನ್ನು ಮನೆ-ಮನೆಗೆ ತಲುಪಿಸುವ ಕೆಲಸ ಮಾಡುತ್ತಿದೆ.ಕೇಂದ್ರದಲ್ಲಿ 60 ವರ್ಷಗಳಲ್ಲಿ ಕಾಂಗ್ರೆಸ್ ಅಧಿಕಾರ ಇದ್ದಾಗ ಮಾಡದಂತಹ ಅಭಿವೃದ್ಧಿ ಕಾರ್ಯವನ್ನು ಕೇವಲ 8 ವರ್ಷದ ಅವಧಿಯಲ್ಲಿ ಬಿಜೆಪಿ ಮಾಡಿ ತೋರಿಸಿದೆ.ದೇಶದಲ್ಲಿ ಪ್ರಸ್ತುತ 2 ರಾಜ್ಯದಲ್ಲಿ ಮಾತ್ರ ಅಧಿಕಾರ ಇದ್ದು ದುರ್ಬಲವಾದ ಕಾಂಗ್ರೆಸ್ ಆಗಿದೆ. ಭಾರತ್ ಜೋಡೋ ಕಾರ್ಯಕ್ರಮ ಮಾಡಲು ಹೊರಟು ಪಕ್ಷವನ್ನೆ ಬಲಹೀನ ಮಾಡುತ್ತಿದೆ ಇದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ.

ಆಧಾರ ರಹಿತವಾದ ಆರೋಪವನ್ನು ಮಾಡುವ ಮೂಲಕ ಕೆಳಮಟ್ಟದ ಕೆಲಸವನ್ನು ಕಾಂಗ್ರೆಸ್ ಪಕ್ಷದ ನಾಯಕರೇ ಪೋಸ್ಟರ್ ಅಂಟಿಸುವಂತಹ ಕೆಲಸಕ್ಕೆ ಮುಂದಾಗಿದ್ದಾರೆ.ಇದರಿಂದ ಜನರ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಇಂತಹ ಆರೋಪಗಳು ಇದ್ದರೆ ಬಿಜೆಪಿಯೇ ಲೋಕಾಯುಕ್ತಕ್ಕೆ ಬಲವಾದ ಅಧಿಕಾರ ನೀಡಿದ್ದು ಸಾಕ್ಷಿ ಆಧಾರ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಕೀಳು ಮಟ್ಟದ ಅಪಪ್ರಚಾರದಿಂದ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ. ರಾಜ್ಯದ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವೇ 150ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಅಧಿಕಾರಕ್ಕೆ ಬರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಉಪಸ್ಥಿತರಿದ್ದರು.

Gayathri SG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

56 seconds ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

7 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

22 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

38 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago