News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Belthangady: Swasthya Sankalpa programme to create awareness among students about bad habits
Photo Credit : By Author

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೇಣೂರು ವಲಯ, ಲಯನ್ಸ್ ಕ್ಲಬ್ ವೇಣೂರು ಹಾಗೂ ಎಸ್‌.ಡಿ.ಎಂ. ತಾಂತ್ರಿಕ ತರಬೇತಿಯ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ದಾರಿ ತಪ್ಪುವ ಕಾರಣಗಳು, ಆದರ್ಶ ವಿದ್ಯಾರ್ಥಿಯಲ್ಲಿ ಇರಬೇಕಾದ ಗುಣ ನಡತೆಗಳ ಬಗ್ಗೆ ಸವಿವಿವರವಾದ ಮಾಹಿತಿಯನ್ನಿತ್ತರು. ಶಿಕ್ಷಣ ಅಂದರೆ ಕೇವಲ ಸರ್ಟಿಪಿಕೇಟ್ ಅಲ್ಲ, ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿದಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ ಎಂದರು.

ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಅವರು ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ಸಂಪಾದನೆಯ ಮಾರ್ಗದಲ್ಲಿ ಹೆಚ್ಚು ಆಸಕ್ತಿಯನ್ನು ಬೆಳೆಸಿಕೊಂಡು ದುಶ್ಚಟಗಳಿಗೆ ಬಲಿ ಬೀಳುವ ಸಂಭವಗಳು ಕಡಿಮೆ ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸಿ, ಅಮೂಲ್ಯವಾದ ಜೀವವನ್ನು ರಕ್ಷಿಸ ಬೇಕೆಂದು ಕರೆಯಿತ್ತರು.

ಸಂಸ್ಥೆಯ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಯಶವಂತ್ ಎಸ್., ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಗಿರೀಶ್ ಕೆ.ಎಸ್., ಲಯನ್ಸ್ ಕ್ಲಬ್ ಅಧ್ಯಕ್ಷ ಸೀತಾರಾಮ್ ಆಚಾರ್ಯ, ಮಂಜುಶ್ರೀ ಭಜನಾ ಮಂಡಳಿ ಅಧ್ಯಕ್ಷ ಜಗನಾಥ ದೇವಾಡಿಗ ಉಪಸ್ಥಿತರಿದ್ದರು.

ಕಿರಿಯ ತರಬೇತಿ ಅಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿ, ಧರ್ಮಸ್ಥಳ ಯೋಜನೆಯ ವಲಯ ಮೇಲ್ವಿಚಾರಕಿ ಶಾಲಿನಿ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಸತೀಶ್ ನಿರ್ವಹಿಸಿದ್ದರು. ವಿನಯಚಂದ್ರ ರಾಜ್ ಸಂಘಟಿಸಿದರು. ಸಭಾ ಕಾರ್ಯಕ್ರಮದ ಬಳಿಕ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು