News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: ಯಕ್ಷಗಾನ ಬಯಲಾಟದಲ್ಲಿ ಉಳಿಕೆಯಾದ ಮೊತ್ತ ಹಸ್ತಾಂತರ

The remaining amount of Yakshagana Bayalata has been handed over
Photo Credit : By Author

ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ ಯಕ್ಷ ಬಳಗ ಅಳದಂಗಡಿ ಸಮಿತಿಯ ಸಹಕಾರದೊಂದಿಗೆ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಅಳದಂಗಡಿ ನಮನ ಸಭಾಂಗಣದಲ್ಲಿ ನಡೆದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಹಾಗೂ ಯಕ್ಷಗಾನ ಕ್ಷೇತ್ರದ ಸಾಧಕರಿಗೆ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಉಳಿಕೆಯಾದ ರೂಪಾಯಿ 50000.00( ಐವತ್ತು ಸಾವಿರ ) ಮೊತ್ತವನ್ನು ಜೀರ್ಣೋದ್ಧಾರಗೊಳ್ಳುತ್ತಿರುವ ಹಾಗೂ ದಿನಾಂಕ 24/01/2023 ರಿಂದ 26/01/2023 ರವರೆಗೆ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ವರ್ಷಾವಧಿ ನೇಮೋತ್ಸವ ನಡೆಯಲಿರುವ ಕುದ್ಯಾಡಿ-ಬರಾಯ ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಇಂದು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಯಕ್ಷ ಬಳಗ ಬೆಳ್ತಂಗಡಿ ಸಮಿತಿಯ ಗೌರವ ಅಧ್ಯಕ್ಷರಾದ ರಕ್ಷಿತ್ ಶಿವರಾಂ ,ವಲಯ ಸಮಿತಿಯ ಅಧ್ಯಕ್ಷರಾದ ಸುಭಾಷ್ ಚಂದ್ರ ರೈ ಪಡ್ಯೋಡಿ ಗುತ್ತು, ಗೌರವ ಅಧ್ಯಕ್ಷರಾದ ಸಂಜೀವ ಪೂಜಾರಿ ಕೊಡಂಗೆ ,ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕುದ್ಯಾಡಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಅನಂತರಾಜ್ ಪೂವಣಿ ಅಂತರಗುತ್ತು, ಗೌರವಾಧ್ಯಕ್ಷರಾದ ಕೊರಗಪ್ಪ ಪೂಜಾರಿ ಕೊಡಿಬಾಳೆ , ಪ್ರಮುಖರಾದ ಲಿಂಗಪ್ಪ ಪೂಜಾರಿ ಕೆಂಪನೊಟ್ಟು, ಶಶಿಕಾಂತ್ ಜೈನ್ ಮುಂಡಾಜೆ ಗುತ್ತು, ಯಕ್ಷ ಬಳಗ ತಾಲೂಕು ಸಮಿತಿಯ ಕಾರ್ಯದರ್ಶಿ ನಿತ್ಯಾನಂದ ನಾವರ,ವಲಯ ಸಮಿತಿಯ ಕಾರ್ಯದರ್ಶಿ ವೀರೇಂದ್ರ ಕುಮಾರ್ ಜೈನ್ , ಕೋಶಾದಿಕಾರಿ ಚಂದ್ರಶೇಖರ್ ಅಳದಂಗಡಿ,ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಸದಾನಂದ ಬಿ.ಕುದ್ಯಾಡಿ,ಜತೆ ಕಾರ್ಯದರ್ಶಿಗಳಾದ ಸಜಿತ್ ಕುದ್ಯಾಡಿ, ವಸಂತ ಕುಲೆಚ್ಚಾವು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ,ಯಕ್ಷ ಬಳಗ ಅಳದಂಗಡಿಯ ಸಮಿತಿಯ ಸದಸ್ಯರು ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು