Categories: ಮಂಗಳೂರು

ಬೆಳ್ತಂಗಡಿ: ನ.7 ರಂದು ಕಾಣಿಸಿಕೊಂಡಿದ್ದ ಹೊಂಡ, ಪಟ್ಟಣ ಪಂಚಾಯತ್ ವತಿಯಿಂದ ಸ್ಥಳ ಪರಿಶೀಲನೆ

ಬೆಳ್ತಂಗಡಿ: ‌ನಗರದ ರಿಕ್ಷಾ ಪಾರ್ಕಿಂಗ್ ಬಳಿ ನ.7 ರಂದು ಕಾಣಿಸಿಕೊಂಡಿದ್ದ ಹೊಂಡದ ದುರಸ್ತಿಯನ್ನು ಪಟ್ಟಣ ಪಂಚಾಯತ್ ವತಿಯಿಂದ ಮಂಗಳವಾರ ನಿರ್ವಹಿಸಲಾಯಿತು.

ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಮುಖ್ಯಾಧಿಕಾರಿ ರಾಜೇಶ್ ಕೆ, ಇಂಜಿನಿಯರ್ ಮಹಾವೀರ ಆರಿಗ ಅವರು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡರು.

ರಸ್ತೆಯ ಅಡಿಯಿಂದ ತ್ಯಾಜ್ಯ ನೀರು ಹರಿಯುವ ಒಳಚರಂಡಿ ಇದ್ದು, ಘನ ವಾಹನ ಸಂಚಾರದಿಂದಾಗಿ ಚರಂಡಿ ಮೇಲೆ ಅಳವಡಿಸಿದ ಕಾಂಕ್ರೀಟ್ ಸ್ಲಾಬ್ ಕುಸಿತವಾಗಿರುವ ಹಿನ್ನೆಲೆಯಲ್ಲಿ ಈ ಹೊಂಡ ಉಂಟಾಗಿದೆ ಎಂದು ಇಂಜಿನಿಯರ್ ತಿಳಿಸಿದ್ದಾರೆ.
ಈ‌ ಬಗ್ಗೆ ಮಾತನಾಡಿದ ಮುಖ್ಯಾಧಿಕಾರಿ ರಾಜೇಶ್ ಕೆ ಅವರು, ತುರ್ತು ದುರಸ್ತಿಗಾಗಿ ಪಟ್ಟಣ ಪಂಚಾಯತ್ ಕಡೆಯಿಂದ ಕ್ರಮ ಕೈಗೊಳ್ಳಲಾಗಿದೆ. ಅದಕ್ಕೆ ಬೇಕಾದ ಕಾರ್ಮಿಕರನ್ನು ವ್ಯವಸ್ಥೆ ಮಾಡಲಾಗುದ್ದು ಕ್ರೈನ್ ಮೂಲಕ ಸ್ಲಾಬ್ ಮೇಲೆತ್ತಿ ಅಗತ್ಯ ಬಿದ್ದಲ್ಲಿ‌ ಬೇರೆಯೇ ಸ್ಲಾಬ್ ಅಥವಾ ಇದೇ ಸ್ಲಾಬ್ ಸರಿಯಿದ್ದರೆ ಅದನ್ನೇ ಮರು ಅಳವಡಿಸಿ ಶೀಘ್ರದಲ್ಲೇ ಕ್ರಮ‌ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Sneha Gowda

Recent Posts

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

15 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

20 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

45 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

1 hour ago