News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವದಂದು ಹಿರಿಯ ನಾಗರಿಕರಿಗೆ ಸಾಧಕರಿಗೆ ಗೌರವ

Belthangady: Tributes to senior citizens and achievers on The Amrit Mahotsav of Independence
Photo Credit : Facebook

ಬೆಳ್ತಂಗಡಿ: ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭದಲ್ಲಿ ಆ.15ರಂದು ನೆರಿಯಾ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮದ ಸಭಾಂಗಣದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಬೆಳ್ತಂಗಡಿ ತಾಲ್ಲೂಕಿನ ೭೫ ವರ್ಷ ದಾಟಿದ ಸುಮಾರು ಇನ್ನೂರಕ್ಕೂ ಮಿಕ್ಕಿ ಹಿರಿಯ ನಾಗರಿಕರನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಗೌರವಿಸಲಾಗುವುದು ಎಂದು ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಸಮಾರಂಭ ಉದ್ಘಾಟಿಸುವರು. ಬೆಳ್ತಂಗಡಿ ಧರ್ಮ ಕೇಂದ್ರದ ವಿಕಾರ್ ಜನರಲ್ ವಂದನೀಯ ಫಾದರ್ ಜೋಸ್ ವಲಿಯಪರಂಬಿಲ್ ಆಶೀರ್ವಚನ ನೀಡುವರು.

ಡಾ. ಎಂ. ಎಸ್.ಎಂ. ಅಬ್ದುಲ್ ರಶೀದ್ ಝೈನಿ ಧಾರ್ಮಿಕ ಪ್ರವಚನ ನೀಡುವರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶ್ರೀಧರ ಜಿ. ಭಿಡೆ, ನೆರಿಯಾ ಗ್ರಾಮಪಂಚಾಯಿತಿ ಅಧ್ಯಕ್ಷರಾದ ವಸಂತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ ಶುಭಾಶಂಸನೆ ಮಾಡುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು