News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ಎರಡು ಬೈಕ್ ಗಳ ನಡುವೆ ಡಿಕ್ಕಿ, ಸವಾರ ಸಾವು

Uttar Pradesh: Three killed as truck rams into dhaba
Photo Credit : By Author

ಬೆಳ್ತಂಗಡಿ: ಎರಡು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ.

ಸಾವನ್ನಪ್ಪಿದ ಯುವಕ ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿರುವ ಬಿ.ಬಿ.ಎ. ವಿದ್ಯಾರ್ಥಿ ಮಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ‌.

ಮಂಗಳೂರಿನಲ್ಲಿರುವ ಕಾಲೇಜಿಗೆ ತನ್ನ ಬೈಕ್ ನಲ್ಲಿ ಶಫೀಕ್ ಹೋಗುತ್ತಿದ್ದಾಗ ಪುಂಜಾಲಕಟ್ಟೆ ಶಾರದಾ ಮಂಟಪದ ಬಳಿ ಎದುರುಗಡೆಯಿಂದ ಬಂದ ಬೈಕ್ ಗೆ ಡಿಕ್ಕಿಯಾಗಿದೆ. ಶಫೀಕ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ.

ಮತ್ತೊಂದು ಬೈಕ್ ನಲ್ಲಿದ್ದರು ಮಡಂತ್ಯಾರು ನಲ್ಲಿ ತರಕಾರಿ ಅಂಗಡಿಯ ಕೆಲಸಗಾರರು ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು