News Karnataka Kannada
Tuesday, May 07 2024
ಮಂಗಳೂರು

ಬೆಳ್ತಂಗಡಿ: ವಿಷಯುಕ್ತ ಪದಾರ್ಥ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮೃತ!

Belthangady: Two members of a family died after consuming a poisonous substance.
Photo Credit : By Author

ಬೆಳ್ತಂಗಡಿ: ವಿಷಯುಕ್ತ ಪದಾರ್ಥ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ನ.22 ರಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.

ಪುದುವೆಟ್ಟು ಗ್ರಾಮದ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(80) ಹಾಗೂ ಇವರ ಪುತ್ರ ಓಡಿಯಪ್ಪ(41) ಮೃತಪಟ್ಟವರು. ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು.

ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು.ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇದರಿಂದ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಮತ್ತೊಂದು ಅವಘಡ ತಪ್ಪಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಶವಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸಾವಿನ ನಿಖರ ಕಾರಣ ತನಿಖೆ ಬಳಿಕ ಸ್ಪಷ್ಟವಾಗಿ ತಿಳಿದು ಬರಬೇಕಾಗಿದೆ. ತೀರಾ ಬಡ ಕುಟುಂಬವಾಗಿದ್ದು, ಮನೆಯಲ್ಲಿ ಮೂವರು ಪುರುಷರು ಮಾತ್ರ ವಾಸವಾಗಿದ್ದರು. ಬೆಳಗಿನ ವೇಳೆ ಮನೆಯಲ್ಲಿದ್ದ ಇಬ್ಬರ ಶವಗಳು ಅಂಗಳದಲ್ಲಿ ಕಂಡು ಬಂದಿದ್ದವು. ಮನೆ ಒಳಗೆ ಅನ್ನ ಹಾಗೂ ಉಳಿದ ಅಣಬೆ ಪದಾರ್ಥ ಪಾತ್ರೆಗಳಲ್ಲಿ ಕಂಡು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು