ಬೆಳ್ತಂಗಡಿ: ವಿಷಯುಕ್ತ ಪದಾರ್ಥ ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ನ.22 ರಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ.
ಪುದುವೆಟ್ಟು ಗ್ರಾಮದ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(80) ಹಾಗೂ ಇವರ ಪುತ್ರ ಓಡಿಯಪ್ಪ(41) ಮೃತಪಟ್ಟವರು. ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು.
ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು.ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಇದರಿಂದ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಮತ್ತೊಂದು ಅವಘಡ ತಪ್ಪಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಶವಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸಾವಿನ ನಿಖರ ಕಾರಣ ತನಿಖೆ ಬಳಿಕ ಸ್ಪಷ್ಟವಾಗಿ ತಿಳಿದು ಬರಬೇಕಾಗಿದೆ. ತೀರಾ ಬಡ ಕುಟುಂಬವಾಗಿದ್ದು, ಮನೆಯಲ್ಲಿ ಮೂವರು ಪುರುಷರು ಮಾತ್ರ ವಾಸವಾಗಿದ್ದರು. ಬೆಳಗಿನ ವೇಳೆ ಮನೆಯಲ್ಲಿದ್ದ ಇಬ್ಬರ ಶವಗಳು ಅಂಗಳದಲ್ಲಿ ಕಂಡು ಬಂದಿದ್ದವು. ಮನೆ ಒಳಗೆ ಅನ್ನ ಹಾಗೂ ಉಳಿದ ಅಣಬೆ ಪದಾರ್ಥ ಪಾತ್ರೆಗಳಲ್ಲಿ ಕಂಡು ಬಂದಿದೆ.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…