ಮಂಗಳೂರು

ಬೆಳ್ತಂಗಡಿ: ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ನೀವು ಆಯ್ದ ಬ್ಯೂಟಿಪಾರ್ಲರ್ ಕ್ಷೇತ್ರದಲ್ಲಿ ಮಾಸ್ಟರ್ ಆಗುವ ಪ್ರಯತ್ನ ಮಾಡಿ, ನಿಮ್ಮ ಕುರಿತು ಚುಚ್ಚಿ ಮಾತನಾಡಿದವರೆ ಮೆಚ್ಚಿ ಮಾತನಾಡುವಂತೆ ಬೆಳೆಯಿರಿ ಎಂದು ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಉಜಿರೆಯಲ್ಲಿನ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆದ 30 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿ‌ಸಿದರು.

ಜೀವನ ಪಾಠದ ಬೋಧನೆಯೆ ರುಡ್‍ಸೆಟ್ ಸಂಸ್ಥೆಯ ವಿಶೇಷತೆ. ಇಲ್ಲಿಂದ ಹೋಗಿ ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ಉತ್ತಮ ಸಾಧಕರಾಗಿ ಎಂದು ಕಿವಿಮಾತು ಹೇಳಿದರು.

ರುಡ್‍ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರರವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಕಲಿತ ವಿದ್ಯೆಯಿಂದ ಸ್ವಾವಲಂಬಿಗಳಾಗಿ ಕುಟುಂಬಕ್ಕೆ ಹೆತ್ತವರಿಗೆ ಹೆಮ್ಮೆ ತರುವ ರೀತಿಯಲ್ಲಿ ಮುಂದೆ ಹೆಜ್ಜೆಯಿಡಿ ಎಂದರು. ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ಎಂ. ಸುರೇಶ್‍ವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಅತಿಥಿ ಉಪನ್ಯಾಸಕಿ ಮಾಧವಿ ರೈ ರವರು ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರೆ ಉಪನ್ಯಾಸಕಿ ಅನಸೂಯ ವಂದಿಸಿದರು. 30 ದಿನಗಳ ಕಾಲ ನಡೆದ ಈ ತರಬೇತಿ ಕಾರ್ಯಕ್ರಮದಲ್ಲಿ 35 ಶಿಬಿರಾರ್ಥಿಗಳು ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದರು.

Gayathri SG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

7 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

24 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

52 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago