News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ರುಡ್‍ಸೆಟ್ ಸಂಸ್ಥೆಗಳ ನಿರ್ದೇಶಕರು ಮತ್ತು ನೌಕರರ ವಾರ್ಷಿಕ ಸಮಾವೇಶದ ಸಮಾರೋಪ

Belthangady: Valedictory of annual conference of directors and employees of RUDSET institutions
Photo Credit :

ಬೆಳ್ತಂಗಡಿ: ಅನುಭವ, ಅನಿಸಿಕೆ ಮತ್ತು ಅಭಿಪ್ರಾಯಗಳ ವಿನಿಮಯದೊಂದಿಗೆ ತರಬೇತಿಯ ಗುಣಮಟ್ಟವನ್ನು ಸುಧಾರಿಸುವುದೇ ರುಡ್‍ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ನೌಕರರ ವಾರ್ಷಿಕ ಸಮಾವೇಶದ ಉದ್ದೇಶವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ “ಶ್ರೀ ಸನ್ನಿಧಿ” ಅತಿಥಿಗೃಹದಲ್ಲಿ ಎರಡು ದಿನ ನಡೆದ ರುಡ್‍ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ನೌಕರರುಗಳ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. 1982ರಲ್ಲಿ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ಅಲ್ಪಾವಧಿ ತರಬೇತಿ ನೀಡುವ ರುಡ್‍ಸೆಟ್ ಸಂಸ್ಥೆಗಳ ಸೇವೆ-ಸಾಧನೆ ರಾಷ್ಟ್ರಮಟ್ಟದಲ್ಲಿ ಇಂದು ಗುರುತಿಸಲ್ಪಟ್ಟಿದ್ದು ಸರ್ಕಾರದ ಮಾನ್ಯತೆಯನ್ನೂ ಹೊಂದಿದೆ. ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ಮಹಿಳಾ ಸಬಲೀಕರಣವೂ ಆಗಿದೆ. ಶೇಕಡಾ 73 ರಷ್ಟು ಮಹಿಳೆಯರು ಸ್ವ-ಉದ್ಯೋಗ ತರಬೇತಿ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಪ್ರಾದೇಶಿಕವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು ಸಂಸ್ಥೆಯ ನಿರ್ದೇಶಕರುಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಪರಿಹರಿಸಿಕೊಳ್ಳಬೇಕು. ತರಬೇತಿಯ ಮಾದರಿ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

27 ರುಡ್‍ಸೆಟ್ ಸಂಸ್ಥೆಗಳ ಮತ್ತು ಅದೇ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 590 ಆರ್‍ಸೆಟಿಗಳು ಇಂದು ದೇಶದೆಲ್ಲೆಡೆ ಯುವಜನತೆಯ ಭರವಸೆಯ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಆರ್‍ಸೆಟಿಯ ಸುಸಜ್ಜಿತ ನೂತನ ಕಟ್ಟಡವು ಇದೇ ಸೆಪ್ಟೆಂಬರ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಹೆಗ್ಗಡೆಯವರು ಪ್ರಕಟಿಸಿದರು. ಬೆಂಗಳೂರಿನಲ್ಲಿರುವ ಕೆನರಾ ಬ್ಯಾಂಕ್ ಪ್ರಧಾನ ಕಾರ್ಯಾಲಯದ ಹಿರಿಯ ಪ್ರಬಂಧಕ ಸಂಜೀತ್ ಕುಮಾರ್ ಶುಭಾಶಂಸನೆ ಮಾಡಿ, ಬ್ಯಾಂಕ್ ವತಿಯಿಂದ ರುಡ್‍ಸೆಟ್ ಸಂಸ್ಥೆಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಭುವನೇಶ್ವರ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ಅರಬಿತ್‍ದಾಸ್, ಗಝಿಯಾಬಾದ್ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕಿ ಸುಮನ್ ಲತಾ ಶರ್ಮಾ, ನಡಿಯಾಡ್ ರುಡ್‍ಸೆಟ್ ಸಂಸ್ಥೆಯ ನಿರ್ದೇಶಕ ಅಜಯ ಕುಮಾರ್ ಪಾಠಕ್ ಮತ್ತು ಮಧುರೈ ರುಡ್‍ಸೆಟ್ ಸಂಸ್ಥೆಯ ಹಿರಿಯ ತರಬೇತುದಾರರಾದ ವೀರರಾಘವನ್ ವಾರ್ಷಿಕ ಸಮಾವೇಶದ ಬಗ್ಯೆ ತಮ್ಮ ಅನಿಸಿಕೆ, ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ರುಡ್‍ಸೆಟ್ ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರ ಆರಂಭದಲ್ಲಿ ಸ್ವಾಗತಿಸಿ, ವರದಿ ಸಾದರ ಪಡಿಸಿದರು.

ಉತ್ತಮ ಸಾಧನೆ ಮಾಡಿದ ರುಡ್‍ಸೆಟ್ ಸಂಸ್ಥೆಗಳ ನಿರ್ದೇಶಕರುಗಳನ್ನು ಗೌರವಿಸಲಾಯಿತು. ಉಜಿರೆ ರುಡ್‍ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಅನಸೂಯ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು