ಮಂಗಳೂರು

ಬೆಳ್ತಂಗಡಿ: ಕಲ್ಮಂಜ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುತ್ ಅದಾಲತ್

ಬೆಳ್ತಂಗಡಿ: ಹೆಚ್ಚಿನ ಒತ್ತಡ ಇರುವ ಕಕ್ಕಿಂಜೆ ವಿದ್ಯುತ್ ಫೀಡರನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಸದ್ಯವೇ ಆರಂಭವಾಗಲಿದೆ. ಉಜಿರೆ, ಪಿಲಿಕಳ, ಕುತ್ಲೂರು, ಬೆಳಾಲು ಮೊದಲಾದ ಕಡೆಗಳಲ್ಲಿ ನೂತನ ಸಬ್ ಸ್ಟೇಷನ್ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಕಾಮಗಾರಿಗಳು ಆರಂಭವಾಗಲಿವೆ. ಇವುಗಳ ನಿರ್ಮಾಣದಿಂದ ಬೆಳ್ತಂಗಡಿ ತಾಲೂಕಿನ ವಿದ್ಯುತ್ ಪೂರೈಕೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಮೆಸ್ಕಾಂ ಬಂಟ್ವಾಳ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ ಪೈ ಹೇಳಿದರು.

ಅವರು ಶನಿವಾರ ಕಲ್ಮಂಜ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿದ ಕಲ್ಮಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿದ್ಯುತ್ ಅದಾಲತ್ ನಲ್ಲಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನಲ್ಲಿ ತಂತಿ ಬದಲಾವಣೆ, ನೂತನ ಪರಿವರ್ತಕ ಅಳವಡಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರಕಾರದಿಂದ 86 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದೆ. ಇದರ ಕಾಮಗಾರಿಗಳು ಕೂಡ ನಡೆಯಲಿದ್ದು, ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಹೇಳಿದರು.

ಕಲ್ಮಂಜ ಗ್ರಾಪಂ ಅಧ್ಯಕ್ಷ ಶ್ರೀಧರ ಎಂ.ನಿಡಿಗಲ್, ಪಿ.ಡಿ.ಒ. ಇಮ್ತಿಯಾಜ್, ಉಜಿರೆ ಶಾಖಾ ಕೇಂದ್ರದ ಎ.ಇ.ವಸಂತ, ಧರ್ಮಸ್ಥಳ ಶಾಖಾ ಕೇಂದ್ರದ ಎ.ಇ. ಸುಹಾಸ್ ಕುಮಾರ್, ಮುಂಡಾಜೆ ಶಾಖಾ ಕೇಂದ್ರದ ಜೆ.ಇ. ಕೃಷ್ಣೇಗೌಡ ಉಪಸ್ಥಿತರಿದ್ದರು.

ಉಜಿರೆ ಉಪ ವಿಭಾಗದ ಎ.ಇ.ಇ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಕಾರ್ಯಕ್ರಮ ನಿರ್ವಹಿಸಿದರು. ಗ್ರಾಮಸ್ಥರಾದ ರಾಘವೇಂದ್ರ ದೇವರಗುಡ್ಡೆ, ಗುರುಪ್ರಸಾದ್ ಕೋಟ್ಯಾನ್,ಸುಧೀಂದ್ರ ಹೆಬ್ಬಾರ್,ಗುರುಪ್ರಸಾದ್ ಗೋಖಲೆ, ಕುಮಾರನಾಥ ಶೆಟ್ಟಿ, ಶಿವರಾಮ ಮೊದಲಾದವರು ಸಮಸ್ಯೆಗಳ ಕುರಿತು ವಿವರಿಸಿದರು.

ಪ್ರಮುಖ ಸಮಸ್ಯೆಗಳು

ಕುಡೆಂಚಿ,ಕಂದೂರು, ದೇವರಗುಡ್ಡೆ ಮೊದಲಾದ ಸ್ಥಳಗಳಲ್ಲಿ ಹಾದುಹೋಗಿರುವ ವಿದ್ಯುತ್ ಲೈನ್ ನ ತಂತಿಗಳು ತೀರಾ ಹಳೆಯದಾಗಿದ್ದು ಮುರಿದು ಬೀಳುತ್ತಿವೆ ಇವುಗಳನ್ನು ತ್ವರಿತವಾಗಿ ಬದಲಾಯಿಸುವ ಕುರಿತು ಗ್ರಾಮಸ್ಥರು ಆಗ್ರಹಿಸಿದರು. ಕರಿಯನೆಲದಲ್ಲಿ ಲೋ ವೋಲ್ಟೇಜ್ ಸಮಸ್ಯೆ ಇದ್ದು ನೂತನ ಪರಿವರ್ತಕ ಅಳವಡಿಕೆಗೆ ಗ್ರಾಮಸ್ಥರು ಬೇಡಿಕೆ ಸಲ್ಲಿಸಿದರು.ಗ್ರಾಮೀಣ ರಸ್ತೆಗಳ ಬದಿ ವಿದ್ಯುತ್ ಕಂಬಗಳನ್ನು ಹಾಕಿರುವುದರಿಂದ ರಸ್ತೆ ಅಗಲೀಕರಣ ಚರಂಡಿ ದುರಸ್ತಿಗೆ ಸಮಸ್ಯೆ ಉಂಟಾಗಿದೆ. ವಿದ್ಯುತ್ ಲೈನ್ ಮೇಲ್ಭಾಗದಲ್ಲಿರುವ ಮರಗಳ ಗೆಲ್ಲುಗಳು ಮುರಿದು ಬೀಳುತ್ತಿದ್ದು, ಈ ಬಗ್ಗೆ ಮೆಸ್ಕಾಂ ಗಮನ ಹರಿಸಿ ಕಾಲಕಾಲಕ್ಕೆ ಇವುಗಳನ್ನು ತೆರೆವುಗೊಳಿಸಬೇಕು ಎಂದು ಗ್ರಾಮಸ್ಥರು ತಿಳಿಸಿದರು.

Gayathri SG

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

8 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

8 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

8 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

9 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

9 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

9 hours ago