ಮಂಗಳೂರು

ಬೆಳ್ತಂಗಡಿ: ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ

ಬೆಳ್ತಂಗಡಿ: ಭಾರತದ ಕುಶಲ ಕಲೆಗೆ ಶಕ್ತಿಯನ್ನು ತುಂಬಿದವರು ವಿಶ್ವಕರ್ಮ ಸಮುದಾಯದವರು ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ಅವರು ಶನಿವಾರ ತಾಲೂಕು ಆಡಳಿತ ವತಿಯಿಂದ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಲೆ ಸಂಸ್ಕೃತಿಗೆ ಹೆಸರುವಾಸಿಯಾದ ದೇಶ ಭಾರತದ ಇದಕ್ಕೆ ಮೂಲ ಕೊಡುಗೆ ವಿಶ್ವಕರ್ಮ ಸಮುದಾಯದವರದ್ದು.ತಾಲೂಕಿನ ವಿಶ್ವಕರ್ಮ ಸಮುದಾಯ ಭವನಕ್ಕೆ 55ಲಕ್ಷ ರೂಗಳನ್ನು ನೀಡಿದ್ದು ಮುಂದಿನ ವರ್ಷದಿಂದ ತಾಲೂಕು ಮಟ್ಟದ ವಿಶ್ವಕರ್ಮ ದಿನಾಚರಣೆಯನ್ನು ಲಾಯಿಲದ ವಿಶ್ವಕರ್ಮ ಸಭಾ ಭವನದಲ್ಲಿ ಅಚರಿಸಲಾಗುವುದು ಎಂದರು.

ವಿಶ್ವಕರ್ಮ ಸಂಘದ ಮಾಜಿ ಅದ್ಯಕ್ಷ ಸತೀಶ್ ಅಚಾರ್ಯ ಮಾತನಾಡಿ ವಿಶ್ವಕರ್ಮ ಸಮಾಜಕ್ಜೆ ಇದುವರೆಗೆ ಯಾರೂ ನೀಡದ ಸಹಕಾರವನ್ನು ಶಾಸಕ ಹರೀಶ್ ಪೂಂಜಾ ನೀಡಿದ್ದಾರೆ. ನಮ್ಮ ಸುಮುದಾಯ ಭವನಕ್ಕೆ 55 ಲಕ್ಷ ರೂಗಳನ್ನು ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಅಲ್ಲದೆ ನಮ್ಮ ಸಮುದಾಯದ ಅನೇಕ ಮಂದಿಗೆ ವಿವಿಧ ಕ್ಷೇತ್ರದಲ್ಲಿ ಅವಕಾಶ ನೀಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪತಹಸೀಲ್ದಾರ್ ರವಿ ಕುಮಾರ್ ಮಾತನಾಡಿ ವಿಶ್ವಕರ್ಮ ಸಮುದಾಯ ದೇವ ಶಿಲ್ಪಿಗಳು ಎಂದರು. ಪ್ರಥಮ ದರ್ಜೆ ಸಹಾಯಕಿ ಹೇಮಾ ಸ್ವಾಗತಿಸಿದರು, ಪ್ರಥಮ ದರ್ಜೆ ಸಹಾಯಕ ಮೃತ್ಯುಂಜಯ ನಿರೂಪಿಸಿ ಪ್ರಥಮ ದರ್ಜೆ ಸಹಾಯಕಿ ಅನಿತಾ ವಂದಿಸಿದರು.

Gayathri SG

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

14 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

36 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

48 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago