News Karnataka Kannada
Thursday, April 25 2024
ಮಂಗಳೂರು

ಬೆಳ್ತಂಗಡಿ: ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ, ಪಾದಚಾರಿ ಯುವತಿಗೆ ಗಂಭೀರ ಗಾಯ

Belthangady: Woman injured after lorry collides with vehicles in Belthangady
Photo Credit : News Kannada

ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಜು.11ರಂದು ಬೆಳ್ತಂಗಡಿಯ ಸೇತುವೆಯ ಬಳಿ ನಡೆದಿದೆ.

ಕರಂಬಾರು ಗ್ರಾಮದ ನಿವಾಸಿ ಲಾಯಿಲದ ಕಂಪ್ಯೂಟರ್ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದ ವೀಕ್ಷಾ(17) ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಉಜಿರೆ ಕಡೆಯಿಂದ ಬರುತ್ತಿದ್ದ ಲಾರಿ ಬೆಳ್ತಂಗಡಿ ಸೇತುವೆ ಬಳಿ ಪ್ರಥಮವಾಗಿ ಬಸ್ಸಿಗೆ ಬಳಿಕ ರಸ್ತೆ ಬದಿ ನಿಲ್ಲಿಸಲಾಗಿದ್ದ 4 ಕಾರುಗಳಿಗೆ‌ ಹಾಗೂ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದು ನಿಂತಿದೆ.

ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು