Categories: ಮಂಗಳೂರು

ಬೆಳ್ತಂಗಡಿ: ಸೌತಡ್ಕದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ವಾರ್ಷಿಕ ಸಮಾರಂಭ

ಬೆಳ್ತಂಗಡಿ: ಸೇವಾಭಾರತಿ ಕನ್ಯಾಡಿ ಇದರ ಅಂಗಸಂಸ್ಥೆಯಾದ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ, ಸೌತಡ್ಕದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ವಾರ್ಷಿಕ ಸಮಾರಂಭ ಸೋಮವಾರ ಜರಗಿತು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿಶೇಷ ಚೇತನರು ಮಾನಸಿಕವಾಗಿ ಸದೃಢರಾದರೆ ಸಮಾಜದಲ್ಲಿ ಮುನ್ನೆಲೆಗೆ ಬರಲು ಸಾಧ್ಯ ಇಂಥವರಿಗೆ ಬಲ ನೀಡುವ ಕೆಲಸ ಮಾಡುತ್ತಿರುವ ಸೇವಾಧಾಮದ ಸೇವೆ ಅನೇಕರಿಗೆ ದಾರಿ ದೀಪವಾಗಿದೆ. ಬೆನ್ನುಹುರಿ ಅಪಘಾತದ ಫಲಾನುಭವಿಗಳನ್ನು ಗುರುತಿಸುವ ಕೆಲಸ ನಡೆಯುತ್ತಿದ್ದು ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಮುರಳಿ ಕೃಷ್ಣ ಇರ್ವತ್ರಾಯ ಮಾತನಾಡಿ ಬೆನ್ನುಹುರಿ ಸಮಸ್ಯೆ ಎದುರಿಸುತ್ತಿರುವವರಿಗೆ ಸ್ಪೂರ್ತಿಯನ್ನು ಮೂಡಿಸುವ ಮೂಲಕ ಶಕ್ತಿ ನೀಡಬೇಕು ದೈಹಿಕವಾಗಿ ಗೆಲ್ಲಲಾಗದುದನ್ನು ಮಾನಸಿಕವಾಗಿ ಗೆಲ್ಲಲು ಸಾಧ್ಯ. ಸೇವೆಯೇ ಜೀವನ ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿರುವ ಸೇವಾಧಾಮದ ಪುನಶ್ಚೇತನ ಕೇಂದ್ರದಲ್ಲಿ ತಿಂಗಳಿಗೆ ಒಂದು ಬಾರಿ ತಮ್ಮ ತಂಡ ಉಚಿತವಾದ ಸೇವೆಯನ್ನು ನೀಡಲಿದೆ ಎಂದು ಹೇಳಿದರು.

ಸೇವಾಧಾಮದ ಸಂಚಾಲಕ ಕೆ. ಪುರಂದರ ರಾವ್ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮಾ ಭಟ್, ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ. ಹರೀಶ್ ರಾವ್, ಉದ್ಯಮಿ ಪ್ರಭಾಕರ ಹೆಗ್ಡೆ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಕೃಷ್ಣ ಭಟ್, ಮೈಸೂರಿನ ಮಂಜುಶ್ರೀ ಸಂಸ್ಥೆಯ ಮಂಜುಳಾ ಹರೀಶ್, ಸೇವಾಧಾಮದ ನಿರ್ದೇಶಕ ರಾಯನ್ ಫೆರ್ನಾಂಡಿಸ್, ಮೇಲ್ವಿಚಾರಕ ಶಶಿಧರ್ ಖಾಡಿಲ್ಕರ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರತ್ನಾವತಿ, ವಿನೋದಾ ಮತ್ತಿತರರು ಉಪಸ್ಥಿತರಿದ್ದರು.

ಸೇವಾಧಾಮದ ಸಂಸ್ಥಾಪಕ, ಅಧ್ಯಕ್ಷ ವಿನಾಯಕ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ನಿರ್ದೇಶಕಿ ರೂಪಾಲಕ್ಷ್ಮಿ ಸ್ವಾಗತಿಸಿದರು. ಪುಷ್ಪಲತಾ ಹಾಗೂ ಚರಣ್ ಎಂ. ಕಾರ್ಯಕ್ರಮ ನಿರೂಪಿಸಿದರು.

ಬೆನ್ನುಹುರಿ ಅಪಘಾತಕ್ಕಕೊಳಗಾದವರಿಗೆ ಗಾಲಿ ಕುರ್ಚಿ, ವಾಕರ್ ಇತ್ಯಾದಿ ವಿತರಿಸಲಾಯಿತು. ಸೇವಾಧಾಮಕ್ಕೆ ವಿಶೇಷ ಸೇವೆಗಳನ್ನು ನೀಡಿದವರನ್ನು ಅಭಿನಂದಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago