News Karnataka Kannada
Tuesday, May 07 2024
ಮಂಗಳೂರು

ಬೆಳ್ತಂಗಡಿ: ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಪ್ರದರ್ಶನ ಆರಂಭ

Yakshagana Bayalata performance of Dharmasthala Mela begins
Photo Credit : By Author

ಬೆಳ್ತಂಗಡಿ: ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ.

ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7.00 ಗಂಟೆಯಿಂದ ರಾತ್ರಿ 12.00ರ ವರೆಗೆ ಕಾಲಮಿತಿಯ ಹರಕೆ ಪ್ರದರ್ಶನ ನಡೆಯಲಿದೆ.

2023ರ ಮೇ 23ರ ವರೆಗೆ ಬಯಲಾಟ ಪ್ರದರ್ಶನದ ಬಳಿಕ ಮೂರು ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಬಯಲಾಟ ಪ್ರದರ್ಶನ ಮುಕ್ತಾಯಗೊಳ್ಳುತ್ತದೆ. ಆಧ್ಯಾತ್ಮಿಕ ಮತ್ತು ಧಾರ್ಮಿಕ ಸಂದೇಶವನ್ನು ನೀಡುವ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಬಯಲಾಟದಲ್ಲಿ ಪ್ರದರ್ಶನ ನೀಡುವುದು ಮೇಳದ ವಿಶೇಷವಾಗಿದೆ.

ಮೇಳದ ತಿರುಗಾಟಕ್ಕೆ ಶನಿವಾರ ಚಾಲನೆ ನೀಡಿ ಶುಭ ಹಾರೈಸಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹೆಚ್. ಕುಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು