News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪೊಲೀಸ್ ಪೇದೆಗೆ ಜೀವಾವಧಿ ಶಿಕ್ಷೆ!

Saliyan
Photo Credit : By Author

ಮಂಗಳೂರು: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ . ಫೇಸ್ ಬುಕ್ ಪ್ರೇಮ ಹೆಸರಿನಲ್ಲಿ ವಂಚನೆ ಪೊಲೀಸ್ ಕಾನ್ ಸ್ಟೆಬಲ್ ಗೆ ಜೀವಾವಧಿ ಶಿಕ್ಷೆ.

ಅಪ್ರಾಪ್ತ ವಯಸ್ಕ ಬಾಲಕಿಯ ಜತೆ ಸ್ನೇಹ ಸಂಪಾದಿಸಿ ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ ಸ್ಟೆಬಲ್ ಒಬ್ಬರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ . ಜಿಲ್ಲಾ ಮೀಸಲು ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಬಜ್ಪೆ ನಿವಾಸಿ ಪ್ರವೀಣ್ ಸಾಲ್ಯಾನ್ 35 ವರ್ಷ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ.

ಬಜ್ಪೆ ಸಿದ್ಧಾರ್ಥ ನಗರ ನಿವಾಸಿ ಪ್ರವೀಣ್ ಸಾಲ್ಯಾನ್ 2015 ರ ಫೆಬ್ರುವರಿ ತಿಂಗಳಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು ಅನಂತರ ತಾನು ಪ್ರೀತಿಸುವುದಾಗಿ ನಾಟಕ ಮಾಡಿದ್ದ. ಮೊಬೈಲ್ ಸಂಖ್ಯೆ ಪಡೆದು ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಈ ನಡುವೆ ತನ್ನ ಗುಪ್ತಾಂಗದ ಚಿತ್ರಗಳನ್ನು ಕಳುಹಿಸಿ ಆಕೆಯ ಜೊತೆ ಅಶ್ಲೀಲ ಸಂಭಾಷಣೆಗಳನ್ನು ನಡೆಸುತ್ತಿದ್ದ.

ಬಳಿಕ ಆಕೆಯಲ್ಲಿ 1ಲಕ್ಷ₹ ಹಣ ನೀಡಬೇಕೆಂದು ಬ್ಲಾಕ್ ಮೇಲ್ ಮಾಡಿದ್ದ , ಇದರಿಂದ ಆತಂಕಗೊಂಡಿದ್ದ ಯುವತಿ 2015 ಜೂನ್ 10 ರಂದು ನಸುಕಿನಲ್ಲಿ ತನ್ನ ಮನೆಯ ಬೆಡ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಘಟನೆಗೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಈ ಯುವತಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಪ್ರವೀಣ್ ಸಾಲ್ಯಾನ್ ಕಾರಣವೆಂದು ಸ್ಪಷ್ಟವಾಗಿ ನಮೂದಿಸಿದ್ದಳು. ವಿಚಾರಣೆ ನಡೆಸಿದ್ದ ಪೊಲೀಸರು ಆಕೆಯ ಡೆತ್ ನೋಟ್ ಮೊಬೈಲ್ ನಲ್ಲಿದ್ದ ಆಕೆಯೊಂದಿಗೆ ಸಂಭಾಷಣೆ ನಡೆಸಿದ್ದ ಸಾಕ್ಷ್ಯಗಳನ್ನು ಆಧರಿಸಿ ದೋಷಾರೋಪ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ ಐಪಿಸಿ ಸೆಕ್ಷನ್ 305 ಜೀವಾವಧಿ ಶಿಕ್ಷೆ ಹಾಗೂ ಎಂಬತ್ತು ಸಾವಿರೂಪಾಯಿ ದಂಡ. ಸೆಕ್ಷನ್ ಹನ್ನೆರಡರ ಪೋಸ್ಕೊ ಕಾಯ್ದೆಯಡಿ 3ವರ್ಷ ಕಠಿಣ ಸಜೆ 1 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನ ದೇವಿ ವಾದ ಮಂಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು