News Karnataka Kannada
Thursday, May 02 2024
ಮಂಗಳೂರು

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ”

Bharatiya Janata Party Belthangady Mandal organises 'Vijay Sankalp Abhiyan'
Photo Credit : By Author

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಇದೇ ಜ 21ರಿಂದ ಜನವರಿ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಿದ್ದು, ಸರಣಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರನ್ನು ತಲುಪಲಿದೆ.

ಈ ಕಾರ್ಯಕ್ರಮಕ್ಕೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾಜಿ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ, ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಸಿಎಂ ಮತ್ತು ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರು ಜ. 21ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳ್ತಂಗಡಿ ಮಂಡಲದಲ್ಲಿ ಈ ಮಹಾಶಕ್ತಿಕೇಂದ್ರ ಮಟ್ಟದಲ್ಲಿ 8 ಬೂತ್ ಗಳಲ್ಲಿ ಜ.21 ರಂದು ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೊಂದು ಸರ್ವಸ್ಪರ್ಶಿ ಕಾರ್ಯಕ್ರಮವಾಗಿದ್ದು, ಬಿಜೆಪಿಯನ್ನು ಗೆಲುವಿನ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ನಮ್ಮ ಮಂಡಲದಲ್ಲಿ 8 ಮಹಾಶಕ್ತಿಕೇಂದ್ರ 85 ಶಕ್ತಿಕೇಂದ್ರದ 241 ಬೂತ್‌ಗಳಲ್ಲಿ ಈ ವಿಜಯ ಸಂಕಲ್ಪ ಅಭಿಯಾನದ ಮೂಲಕ ನಮ್ಮ ಕಾರ್ಯಕರ್ತರು ತಲುಪುತ್ತಾರೆ. ಕೇಂದ್ರ- ರಾಜ್ಯ ಸರಕಾರಗಳ ಮತ್ತು ಸ್ಥಳೀಯ ಶಾಸಕರ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. 2ಲಕ್ಷದ 22 ಸಾವಿರದ 144 ಮನೆಗಳಿಗೆ 50 ಸಾವಿರ ಕುಟುಂಬಗಳಿಗೆ 6 ಸಾವಿರ ಪೇಜ್ ಪ್ರಮುಖರ ಮುಖಾಂತರ ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದು ಫಲಾನುಭವಿಗಳನ್ನು ಮಾತನಾಡಿಸಿ ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ವಾಹನಗಳ ಮೇಲೆ ಸ್ಟಿಕರ್ ಹಾಕಿಸುವ ಕೆಲಸವೂ ನಡೆಯಲಿದೆ.

ಜ. 21ರಿಂದ ಅಭಿಯಾನದ ಆರಂಭ ಆಗಲಿದ್ದು – ಅದಕ್ಕಾಗಿ ಈಗಾಗಲೇ ವ್ಯವಸ್ಥಿತವಾಗಿ ಪೂರ್ವಭಾವಿ ಸಿದ್ಧತೆ ನಡೆದಿವೆ, ಜಿಲ್ಲಾ ಮತ್ತು ಮಂಡಲಗಳಲ್ಲಿ ಸಭೆಗಳು ನಡೆಸಿ ಭಾರತೀಯ ಜನತಾ ಪಕ್ಷ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಪಡೆಯುವ ಗುರಿ ಹಾಕಿಕೊಂಡಿದೆ ಅದಕ್ಕಾಗಿ ಪಕ್ಷವು ತಳಹಂತದಿಂದ ಪಕ್ಷ ಸೇರಿ ವಿವಿಧ ಕಾರ್ಯತಂತ್ರಗಳನ್ನು ಮಾಡುತ್ತಿದೆ. ‘ಡಬಲ್ ಎಂಜಿನ್ ಸರ್ಕಾರಗಳ ಯೋಜನೆಗಳ ಫಲಾನುಭವಿಗಳ ಸಂಖ್ಯೆ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಇದ್ದು, ಆ ಪಟ್ಟಿ ತಯಾರಿಸಲಾಗಿದೆ. ಫಲಾನುಭವಿಗಳನ್ನು ಸಂಪರ್ಕಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಮಾಡಲಿದ್ದಾರೆ. ಇದಲ್ಲದೆ ಮನೆಮನೆಗೆ ಕರಪತ್ರ ಹಂಚುವುದು, ಬಿಜೆಪಿ ಪಕ್ಷದ ಸ್ಟಿಕರ್ ಹಚ್ಚಲು ಪ್ರೇರೇಪಿಸುವುದು, ಗೋಡೆಗಳ ಮೇಲೆ ಬಿಜೆಪಿ ಸಾಧನೆ ಬಿಂಬಿಸುವ ಪೇಂಟಿಂಗ್ ಹಾಗೂ ಸದಸ್ಯತ್ವ ಅಭಿಯಾನ ಈ ಅಭಿಯಾನದ ಭಾಗವಾಗಿದೆ ಕ್ಷೇತ್ರ ಕಾರ್ಯಾಚರಣೆಗೆ ಇಳಿಯಲಿರುವ ರಾಜ್ಯ ಜಿಲ್ಲಾ ಹಾಗೂ ಮಂಡಲಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಸಾಧನೆಗಳನ್ನು ಒಳಗೊಂಡ ಕರಪತ್ರಗಳನ್ನು ಸುಮಾರು ಒಂದು ಕೋಟಿ ಮನೆಗಳಿಗೆ ಹಂಚುವ ಗುರಿ ಹಾಕಿಕೊಂಡಿದ್ದಾರೆ. ಫಲಾನುಭವಿಗಳನ್ನು ಗುರುತಿಸುವುದರ ಜತೆಗೆ ಅವರಿಗೆ ಫಲಾನುಭವಿ ಪತ್ರವನ್ನೂ ವಿತರಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ನಮ್ಮ ಯೋಜನೆಗಳ ಯಶಸ್ಸನ್ನು ಸಾರಲಾಗುವುದು. ಈ ಅಭಿಯಾನದ ಅವಧಿಯಲ್ಲಿ ಒಂದು ಕೋಟಿ ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಸದಸ್ಯತ್ವ ಅಭಿಯಾನ ಸಂಪೂರ್ಣ ಆನ್‌ಲೈನ್ ಇರಲಿದ್ದು (ಮಿಸ್ಡ್ ಕಾಲ್), ನೋಂದಣಿಯಾದ ಸದಸ್ಯರ ಸಂಖ್ಯೆಯನ್ನು ವೆಬ್‌ಸೈಟಿನಲ್ಲಿ ನೇರವಾಗಿ ನೋಡಬಹುದು. ನೋಂದಣಿ ಪ್ರಕ್ರಿಯೆ ಬಗೆಗೂ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಈ ತಿಂಗಳ ಜನವರಿ 29 ‘ಮನ್ ಕೀ ಬಾತ್’ ಕಾರ್ಯಕ್ರಮ ಕರ್ನಾಟಕದ ಪಾಲಿಗೆ ಮತ್ತಷ್ಟು ವಿಶೇಷವಾಗಿರಲಿದೆ. ಪಕ್ಷದ ಕಾರ್ಯಕರ್ತರು ಹಾಗೂ ಪುಮುಖರು ಒಟ್ಟಿಗೇ ಕೂತು ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ಆಲಿಸಲಿದ್ದಾರೆ. ಬೂತ್ ಮಟ್ಟದಿಂದಲೇ ಇದು ನಡೆಯಲಿದ್ದು ಶೇ 90ರಷ್ಟು ಬೂತ್‌ಗಳು ಮನ್ ಕೀ ಬಾತ್ ಆಲಿಸಿ ದಾಖಲೆ ಮಾಡಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್ ಮತ್ತು ಗಣೇಶ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು