ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಸಂಭವಿಸಿದೆ.
ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ. ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು 4 ಗಂಟೆಗೆ ಹೊರಟಿದ್ದ. ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಆತ ಮೃತಪಟ್ಟಿದ್ದಾನೆ.
ಮುಂಜಾವಿನ ವೇಳೆ ನಿದ್ದೆ ಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ