ಮಂಗಳೂರು: ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಸಮೀಪ ಬೃಹತ್ ಗಾತ್ರದ ಕಾಡುಕೋಣವೊಂದು ಕಂಡುಬಂದಿದೆ.
ರಸ್ತೆಯ ಬದಿಯಲ್ಲಿ ತಿರುಗಾಡುತ್ತಿರುವ ದೃಶ್ಯವೊಂದು ಸ್ಥಳೀಯ ಯುವಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸುತ್ತಮುತ್ತ ಭಾರೀ ಗಾತ್ರದ ಕಾಡುಕೋಣಗಳು ಮತ್ತು ಮರಿ ಕೋಣಗಳು ಸುತ್ತಾಡುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ಕೂಡ ಭಯಭೀತರಾಗಿದ್ದಾರೆ.
ರಸ್ತೆಯಲ್ಲಿ ಅಡ್ಡಾಡುತ್ತಿರುವ ಕಾಡುಕೋಣವನ್ನು ವಾಹನದಲ್ಲಿ ಪ್ರಯಾಣಿಸುತ್ತಿರುವ ಗ್ರಾ.ಪಂ. ಸದಸ್ಯ ವಿಜಯ್ ಧೀರಜ್ ಸೆರೆಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.