Categories: ಮಂಗಳೂರು

ಬರಿಮಾರು ಗ್ರಾಮದ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬರಿಮಾರು ಗ್ರಾಮದ ಬೂತ್ ಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಬಳಿಕ ಕಾರ್ಯಕರ್ತರಲ್ಲಿ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಬಾರಿಯ ಚುನಾವಣೆಯಲ್ಲಿ ಗೆಲುವಿಗಾಗಿ ಮಾಡಬೇಕಾದ ಕೆಲಸಗಳ ಬಗ್ಗೆ ಚರ್ಚೆ ನಡೆಸಿದರು. ಬಿಜೆಪಿ ಅವಧಿಯಲ್ಲಿ ನಡೆದ ಅಭಿವೃದ್ಧಿಯನ್ನು ಕಂಡು ಹತಾಶ ಮನೋಭಾವ ಹೊಂದಿರುವ ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಜಾತಿಜಾತಿಗಳ ಲೆಕ್ಕಾಚಾರ ಹಾಕಿಕೊಂಡು ಮನೆಮನೆಗೆ ಹೋಗಿ ಅಪಪ್ರಚಾರದಲ್ಲಿ ತೊಡಗಿದೆ. ಕ್ಷೇತ್ರದ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅವರ ಮತಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದು, ಕ್ಷೇತ್ರದ ಜನತೆ ಇವರ ಮೋಸದ ಜಾಲಕ್ಕೆ ಬೀಳುವುದಿಲ್ಲ ಎಂಬ ವಿಶ್ವಾಸ ನನಗಿದೆ.

ಬಿಜೆಪಿ ಪಕ್ಷದ ದೇವದುರ್ಲಭ ಕಾರ್ಯಕರ್ತರು ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸಿದ್ದು,ಪ್ರತಿಯೊಂದು ಮತವೂ ಬಿಜೆಪಿ ಪರವಾಗುವಂತೆ ಮಾಡುತ್ತಾರೆ ಎಂಬ ದೃಡವಿಶ್ವಾಸವಿದೆ ಎಂದು ತಿಳಿಸಿದರು.

ಚುನಾವಣೆವರೆಗೆ ಕೆಲವೇ ದಿನಗಳನ್ನು ಬಿಜೆಪಿ ಗೆಲುವಿಗಾಗಿ ಮೀಸಲಿಡಿ, ಮುಂದಿನ ಐದು ವರ್ಷಗಳ ಕಾಲ ಕ್ಷೇತ್ರದ ಜನರ ಶ್ರೇಯೋಭಿವೃದ್ದಿಗಾಗಿ ಪ್ರಾಮಾಣಿಕತೆಯಿಂದ ಗೌರವ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಬದ್ದನಿದ್ದೇನೆ ಎಂಬ ಭರವಸೆ ನೀಡುತ್ತೇನೆ ಎಂದರು.

ಜಿ.ಪಂ.ಮಾಜಿ ಸದಸ್ಯೆ ಕಮಲಾಕ್ಷಿ ‌ಕೆ ಪೂಜಾರಿ, ಬರಿಮಾರು ಗ್ರಾ.ಪಂ.ಉಪಾಧ್ಯಕ್ಷ ಸದಾಶಿವ ಜಿ.ಗ್ರಾಮಪಂಚಾಯತ್ ಸದಸ್ಯರುಗಳಾದ ಜಗದೀಶ್, ವನಿತಾ ಎಲ್ ಕೆ. ಧರಣ್, ಪ್ರಮುಖರಾದ ಗಣೇಶ್ ರೈ ಮಾಣಿ, ಸುಬ್ರಹ್ಮಣ್ಯ ಭಟ್ ಬರಿಣಿಕರೆ, ಚಂದ್ರಶೇಖರ್ ಬಾಯಿಲ, ಸದಾನಂದ ಪೂಜಾರಿ, ಜಯಂತ ಪೂಜಾರಿ, ಶಿವಾನಂದ, ಹಂಸರಾಜ್ ಜೈನ್, ಮೋಹನ್ ಕುಮಾರ್ ಜೈನ್, ಪ್ರಭಾಕರ ಸುವರ್ಣ, ಸುಷ್ಮಾಮುಳಿಬೈಲು ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

7 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

7 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

22 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

28 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

41 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

59 mins ago