Categories: ಮಂಗಳೂರು

150 ಕ್ಷೇತ್ರಗಳಲ್ಲಿ ಬಹುಮತದಿಂದ ಬಿಜೆಪಿ ಸರಕಾರ ಆಡಳಿತಕ್ಕೆ ಬರಲಿದೆ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಇಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರ ಪರವಾಗಿ ಬಿಜೈ, ದೇರೆಬೈಲ್ ದಕ್ಷಿಣ, ಕಂಕನಾಡಿ, ಅಳಪೆ, ಜಪ್ಪಿನಮೊಗರು ಹಾಗೂ ಬೋಳಾರದಲ್ಲಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್‌ ಕುಮಾರ್‌ ಕಟೀಲ್‌, ರಾಜ್ಯದಲ್ಲಿ ಭ್ರಷ್ಟಾಚಾರವಿಲ್ಲದೆ ಜನಪರ ಆಡಳಿತ ನೀಡಿದ ಬಿಜೆಪಿ ಸರಕಾರದ ಪರ ಮತದಾರ ಒಲವು ತೋರಿಸುತ್ತಿದ್ದು ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಜನರೇ ಮುನ್ನುಡಿ ಬರೆಯಲಿದ್ದಾರೆ. ಬಿಜೆಪಿಯ ಅಭಿವೃದ್ಧಿ ಓಟಕ್ಕೆ ಜನತೆ ಸಾಥ್ ನೀಡಿದ್ದು ಈ ಬಾರಿ ರಾಜ್ಯದಲ್ಲಿ 150 ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಚುನಾವಣಾ ಕ್ಷೇತ್ರ ಸಂಚಾಲಕ ನಿತಿನ್ ಕುಮಾರ್, ಸಹ ಸಂಚಾಲಕರಾದ ಜಿತೇಂದ್ರ ಕೊಟ್ಟಾರಿ, ರಮೇಶ್ ಹೆಗ್ಡೆ, ದೀಪಕ್ ಪೈ, ಕಿರಣ್ ರೈ, ಅಜಯ್ ಕುಲಶೇಖರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ರೇವತಿ ಶ್ಯಾಮ್ ಸುಂದರ್, ಭಾನುಮತಿ, ಶೋಭಾ ಪೂಜಾರಿ, ಪ್ರಮುಖರಾದ ಪ್ರಶಾಂತ್ ಆಳ್ವ, ವಿನಯ್ ನೇತ್ರಾ, ರಘುವೀರ್ ಬಾಬುಗುಡ್ಡೆ, ಪ್ರಜ್ವಲ್ ಚಿಲಿಂಬಿ, ಉಮಾನಾಥ್ ಅಮೀನ್, ಗಂಗಾಧರ್ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago