News Karnataka Kannada
Tuesday, April 23 2024
Cricket
ಮಂಗಳೂರು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಭೇಟಿಯಾದ ಪುತ್ತಿಲ

BJP national general secretary B L Santhosh meets Puttila
Photo Credit : News Kannada

ಮಂಗಳೂರು: ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿಯ ಭದ್ರ ಕೋಟೆಯಾಗಿದ್ದ ಪುತ್ತೂರು ಒಡೆದ ಮನೆಯಂತಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಸವಾಲು ಒಡ್ಡಿದ್ದ ಹಿಂದುತ್ವದ ಫೈರ್‌ ಬ್ರ್ಯಾಂಡ್‌ ಅರುಣ್‌ ಪುತ್ತಿಲ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ‌.ಎಲ್ ಸಂತೋಷ್ ದೆಹಲಿಗೆ ಕರೆಸಿ ರಹಸ್ಯ ಸಭೆ ನಡೆಸಿದ್ದಾರೆ.

ಪುತ್ತಿಲ ಪರಿವಾರದ ಜೊತೆ ಬಿ.ಎಲ್ ಸಂತೋಷ್, ಎರಡು ಗಂಟೆಗೂ ಅಧಿಕ ಕಾಲ ಸಭೆಯ ನಡೆಸಿದ್ದಾರೆ. ಸಭೆಯಲ್ಲಿ ಸಂತೋಷ್, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪುತ್ತೂರಿನಲ್ಲಿ ಚುನಾವಣಾ ಪೂರ್ವದಲ್ಲಿ ಬಿಜೆಪಿಯಲ್ಲಾದ ಬೆಳವಣಿಗೆಯ ಬಗ್ಗೆಯೂ ಅರುಣ್ ಕುಮಾರ್ ಪುತ್ತಿಲ ಅವರಲ್ಲಿ ಸಂತೋಷ್ ಪಡೆದುಕೊಂಡಿದ್ದಾರೆ.

ಯಾರೆಲ್ಲ ಇದ್ದರು: ದೆಹಲಿಯ ಬಿ.ಎಲ್ ಸಂತೋಷ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ, ಭಾಸ್ಕರ್ ಆಚಾರ್ಯ ಹಿಂದಾರು, ಪುತ್ತೂರಿನ ಖ್ಯಾತ ವೈದ್ಯ ಹಾಗೂ ಪುತ್ತಿಲ ಪರಿವಾರದ ಡಾ. ಸುರೇಶ್ ಪುತ್ತೂರಾಯ, ಉದ್ಯಮಿ ಗಣೇಶ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪುತ್ತಿಲ ಪರ ಬ್ಯಾಟ್ ಬೀಸಿದ ರಾಜರಾಮ್ ಬಿ.ಎಲ್ ಪಾಲ್ಗೊಂಡಿದ್ದಾರೆ.

ಬಿಜೆಪಿ ಸೇರದಿರುವ ಬಗ್ಗೆ ಕೇಳಿದರು: ಅರುಣ್ ಕುಮಾರ್ ಪುತ್ತಿಲ ಬಳಿ ಸಂತೋಷ್, ಬಿಜೆಪಿಯ ಸದಸ್ಯತ್ವ ಪಡೆದು ಬಿಜೆಪಿಯಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸಿ, ಹಳೆಯದನ್ನು ಮರೆತು ಪಕ್ಷ ಕಟ್ಟಲು ಅರುಣ್ ಕುಮಾರ್ ಪುತ್ತಿಲ ಬಳಿ ಸಂತೋಷ್ ಸಹಕಾರ ಕೇಳಿದ್ದಾರೆ. ಬಿಜೆಪಿ ವಿರುದ್ಧವಾದ ಭಾಷಣಗಳನ್ನು ಮಾಡದೇ ಹಿಂದುತ್ವದ ಮೂಲಮಂತ್ರವನ್ನು ಜಪಿಸಿ, ಮಾಧ್ಯಮಗಳಲ್ಲಿ ಹೇಳಿಕೆ ನೀಡುವಾಗ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ಎಚ್ಚರ ವಹಿಸಿ ಎಂದು ಅರುಣ್ ಕುಮಾರ್ ಪುತ್ತಿಲ ಅವರಿಗೆ ಸಂತೋಷ್ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ತೂರು ಬಿಜೆಪಿ ಭಧ್ರಕೋಟೆ ಮತ್ತು ಸಂಘದ ನೆಲೆಯಲ್ಲೂ ಶಕ್ತಿ ಕೇಂದ್ರ ಆಗಿರುವ ಕಾರಣದಿಂದ ಪುತ್ತೂರಿನಲ್ಲಿ ಕಾರ್ಯಕರ್ತರನ್ನು ಒಂದುಗೂಡಿಸುವ ಬಗ್ಗೆ ಅರುಣ್ ಕುಮಾರ್ ಪುತ್ತಿಲ ಬಳಿ ಸಂತೋಷ್ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು